20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕಾಡುತ್ತಿದ್ದ ಕಾಡಾನೆಗಳ ಸಮಸ್ಯೆಗೆ ತಾಂತ್ರಿಕ ಪರಿಹಾರ ಒದಗಿಸುವ ಪ್ರಯತ್ನವಾಗಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಹಳಿ ಬ್ಯಾರಿಕೇಡ್ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಕೊಡಗಿನಿಂದ ಹಾಸನದತ್ತ ಬರುತ್ತಿದ್ದ ಆನೆ ಹಿಂಡುಗಳನ್ನು ತಡೆಯಲು ಸುಮಾರು 35 ಕಿಲೋಮೀಟರ್ ಉದ್ದದ ಈ ತಡೆಗೋಡೆ ನಿರ್ಮಿಸಲಾಗಿದೆ.
ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ 20 ವರ್ಷಗಳಲ್ಲಿ ಕಾಡಾನೆ ದಾಳಿಯಿಂದ 80ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೊಡಗಿನಿಂದ ವಲಸೆ ಬರುವ ಆನೆಗಳು ಹಾಸನದ ಕಾಫಿ ತೋಟಗಳಲ್ಲಿ ನೆಲೆಸುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.
ಆಲೂರು–ಸಕಲೇಶಪುರ ಗಡಿಭಾಗದಲ್ಲಿ ನಿರ್ಮಿಸಲಾದ ಈ ಬ್ಯಾರಿಕೇಡ್‌ನಲ್ಲಿ 13 ಪ್ರಮುಖ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಆನೆಗಳ ಸಂಚಾರವನ್ನು ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸಲಾಗಿದೆ. ಬೇಸಿಗೆ ವೇಳೆಯಲ್ಲಿ ಹೇಮಾವತಿ ಜಲಾಶಯದ ಹಿನ್ನೀರಿನ ಪ್ರದೇಶಗಳಿಗೆ ನೀರಿಗಾಗಿ ಬರುವ ಆನೆಗಳಿಗೆ ಈ ತಡೆಗೋಡೆ ದೊಡ್ಡ ಅಡ್ಡಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಈಗಾಗಲೇ ಹಾಸನದ ಕಾಫಿ ತೋಟಗಳಲ್ಲಿ ಇರುವ 80ಕ್ಕೂ ಹೆಚ್ಚು ಆನೆಗಳ ಬಗ್ಗೆ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಬೆಳೆಗಾರರ ಪ್ರಶ್ನೆಯಾಗಿದೆ. ಪುಂಡಾನೆಗಳನ್ನು ಸ್ಥಳಾಂತರ ಮಾಡುವುದು ಅಥವಾ ಆನೆಧಾಮ ನಿರ್ಮಾಣ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ. ಅರಣ್ಯ ಇಲಾಖೆ ಸ್ಥಳಾಂತರ ಯೋಜನೆಗೆ ಸಿದ್ಧವಾಗಿದ್ದು, ಈ ಕ್ರಮದಿಂದ ಮಲೆನಾಡಿನ ಜನರ ಆತಂಕ ಎಷ್ಟು ಮಟ್ಟಿಗೆ ಕಡಿಮೆಯಾಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬೆಂಗಳೂರು ಹೆಸರಘಟ್ಟದಲ್ಲಿ Bird Flu ಪತ್ತೆ – H5N1 ಆತಂಕ, ಪೌಲ್ಟ್ರಿ ಫಾರಂ ಸೀಲ್!
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಬೆಂಗಳ... ಓದನ್ನು ಮುಂದುವರಿಸಿ
ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ
ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್
ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ... ಓದನ್ನು ಮುಂದುವರಿಸಿ
ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ
ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾ... ಓದನ್ನು ಮುಂದುವರಿಸಿ
ಹೊಸನಗರ
ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್... ಓದನ್ನು ಮುಂದುವರಿಸಿ
ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 1... ಓದನ್ನು ಮುಂದುವರಿಸಿ
ಮದ್ದೂರು
6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ
ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ
“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು
ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ