74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.80 ಕೋಟಿ ಅಂದಾಜು ಮೌಲ್ಯದ ಒಟ್ಟು 15 ಎಕರೆ 0.38 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸ್ಮಶಾನ, ಸರ್ಕಾರಿ ಒಣಿ, ಸರ್ಕಾರಿ ಕುಂಟೆ, ಬಂಡಿದಾರಿ, ಸರ್ಕಾರಿ ಕಟ್ಟೆ, ಗುಂಡುತೋಪು, ಖರಾಬು, ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

 

ವರ್ತೂರು ಹೋಬಳಿಯ ಬಳಗೆರೆ ಗ್ರಾಮದ ಸ.ನಂ 65 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.18 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 5.50 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ವರ್ತೂರು ಗ್ರಾಮದ ಸ.ನಂ 170 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಇದರ ಅಂದಾಜು ಮೌಲ್ಯ ರೂ 1.50 ಕೋಟಿ ಕಸಬಾ ಹೋಬಳಿಯ ಆನೇಕಲ್ ಗ್ರಾಮಾಂತರ ಸ.ನಂ. 426, 427 & 428 ರ ಮಧ್ಯದ ಓಣಿ, ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0. 05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.06 ಲಕ್ಷಗಳಾಗಿರುತ್ತದೆ. ಅತ್ತಿಬೆಲೆ ಹೋಬಳಿಯ ಇಂಡ್ಲಬೆಲೆ ಗ್ರಾಮದ ಸ.ನಂ. 60 ರ ಸರ್ಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.28 ಲಕ್ಷಗಳಾಗಿರುತ್ತದೆ. ಸರ್ಜಾಪುರ ಹೋಬಳಿಯ ಹಾರೋಹಳ್ಳಿ ಗ್ರಾಮದ ಸ.ನಂ. 64, 81 ಹಾಗೂ ಇತರೆ ಬಂಡಿದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 0.80 ಲಕ್ಷ.

 

ಕೆಂಗೇರಿ ಹೋಬಳಿಯ ತಗಚಗುಪ್ಪೆ ಗ್ರಾಮದ ಸ.ನಂ 29 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.56 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ 14 ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.50 ಲಕ್ಷಗಳಾಗಿರುತ್ತದೆ. ಉತ್ತರಹಳ್ಳಿ ಹೋಬಳಿಯ ಉತ್ತರಿ ಗ್ರಾಮದ ಸ.ನಂ 111ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 4 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 25.00 ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ 14/23 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 0.10 ಲಕ್ಷಗಳಾಗಿರುತ್ತದೆ.

 

ದಾಸನಪುರ ಹೋಬಳಿಯ ಬೈಲುಕೋನೆನಹಳ್ಳಿ ಗ್ರಾಮದ ಸ.ನಂ 60 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 30.00 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಮತ್ತಿಹಳ್ಳಿ ಗ್ರಾಮದ ಸ.ನಂ 40 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 5.00 ಕೋಟಿ. ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ 44 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 5.50 ಕೋಟೆಗಳಾಗಿರುತ್ತದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೀದರ್

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ

ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ


Edited by: ಬಾನು

58 minutes ago

   
Image 1
ಕೋಲಾರ

ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು

ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ‌: ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಕೊಪ್ಪಳ

ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ

ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ವಿಜಯಪುರ

ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಚಿಕ್ಕೋಡಿ

ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ

ಚಿಕ್ಕೋಡಿ:  ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1