90 ದಿನಗಳಲ್ಲಿ ಅಂಗನವಾಡಿ ಖಾಲಿ ಹುದ್ದೆ ಭರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದಲ್ಲಿ 90 ದಿನಗಳೊಳಗೆ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಆಯ್ಕೆ ವೇಳೆ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಲಭ್ಯವಿಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ ಎಂದು ಸಚಿವೆ ಮಾಹಿತಿ ನೀಡಿದರು.
ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಇದರಲ್ಲಿ 16 ಕಾರ್ಯಕರ್ತೆ ಮತ್ತು 131 ಸಹಾಯಕಿ ಹುದ್ದೆಗಳ ಆನ್‌ಲೈನ್ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ
ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅ... ಓದನ್ನು ಮುಂದುವರಿಸಿ
ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ
ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ
ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ
ಮಂಗಳೂರು
ವಿದ್ಯಾರ್ಥಿ ಚುನಾವಣೆ ಘೋಷಣೆಗೂ ಮುನ್ನವೇ ಮಂಗಳೂರು ಕಾಲೇಜಿನಲ್ಲಿ ರಾಜಕೀಯ ಕಿಚ್ಚು
ಮಂಗಳೂರು: ಪ್ರಖ್ಯಾತ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಕ್ಯಾ... ಓದನ್ನು ಮುಂದುವರಿಸಿ
51,000 ಅತಿಥಿ ಶಿಕ್ಷಕರಿಗೆ ಸಂಬಳ 3 ತಿಂಗಳಿಂದ ವಿಳಂಬ: ಶಿಕ್ಷಕರು ಅಸಮಾಧಾನ
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ಸಂಬಳ ವಿಳಂಬದ ನಡುವ... ಓದನ್ನು ಮುಂದುವರಿಸಿ
ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ನಿಯೋಗ ಭೇಟಿ
ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ... ಓದನ್ನು ಮುಂದುವರಿಸಿ
ನಾಗಮಂಗಲ
ಗ್ರಾಮೀಣ ಶ್ರಮ ಫಲ: ಮಂಡ್ಯದ ಧನಂಜಯ್ UPSC ಮೂಲಕ IPS ಹುದ್ದೆ - 554ನೇ ರ್ಯಾಂಕ್ IPS ಗೆ ಆಯ್ಕೆ
ಮಂಡ್ಯ: ನಾಗಮಂಗಲ ತಾಲ್ಲೂಕಿನ ಕರಡಹಳ್ಳಿ ಗ್ರಾಮದ ಧನಂಜಯ್, ಯುಪಿಎಸ... ಓದನ್ನು ಮುಂದುವರಿಸಿ
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ