ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್

ಬೆಂಗಳೂರು:  ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ದೃಢೀಕರಿಸಿದೆ. ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿದರೆ ಇಂತಹ ಅಮಾನವೀಯ ಕೃತ್ಯಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

 

ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯೊಂದಿಗೆ, ಶಿಕ್ಷೆ ರದ್ದುಪಡಿಸುವಂತೆ ಅಪರಾಧಿಗಳಾದ ಮಧ್ಯಪ್ರದೇಶದ ಜೈಬನ್ ಆದಿವಾಸಿ, ಮುಖೇಶ್ ಸಿಂಗ್ ಹಾಗೂ ಜಾರ್ಖಂಡ್‌ನ ಮನೀಶ್ ತಿರ್ಕಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅಪರಾಧಿಗಳ ಮೇಲ್ಮನವಿಗಳನ್ನು ವಜಾಗೊಳಿಸಿ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

 

ಅಪರಾಧಿಗಳು ಅಪ್ರಾಪ್ತೆಯ ಜೀವವನ್ನು ಲೆಕ್ಕಿಸದೆ ನಿರಂತರವಾಗಿ ಅತ್ಯಾಚಾರ ಎಸಗಿರುವುದು ಕೇವಲ ವ್ಯಕ್ತಿಯ ವಿರುದ್ಧದ ಅಪರಾಧವಲ್ಲ, ಇಡೀ ಸಮಾಜದ ವಿರುದ್ಧ ನಡೆದ ಅಪರಾಧವಾಗಿದೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆ ಕಡಿತ ಮಾಡಿದರೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಸಂತ್ರಸ್ತೆ ಕೇವಲ 7 ವರ್ಷ 7 ತಿಂಗಳ ವಯಸ್ಸಿನವಳಾಗಿದ್ದು, ಆರೋಪಿಗಳ ಮೇಲೆ ನಂಬಿಕೆ ಇಟ್ಟು ಅವರೊಂದಿಗೆ ತೆರಳಿದ್ದಳು. ತಿಂಡಿ ಕೊಡಿಸುವ ನೆಪದಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲಾಗಿದೆ. ವೈದ್ಯಕೀಯ ವರದಿಗಳ ಪ್ರಕಾರ ಸಂತ್ರಸ್ತೆಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಮೃತದೇಹವನ್ನು ಚರಂಡಿಗೆ ಎಸೆಯಲಾಗಿದೆ ಎಂದು ನ್ಯಾಯಪೀಠ ಉಲ್ಲೇಖಿಸಿದೆ. ಈ ಘಟನೆ ನ್ಯಾಯಾಂಗದಷ್ಟೇ ಅಲ್ಲ, ಇಡೀ ಸಮಾಜದ ಆತ್ಮಸಾಕ್ಷಿಗೆ ಆಘಾತ ತಂದಿರುವುದಾಗಿ ಅಭಿಪ್ರಾಯಪಟ್ಟ ನ್ಯಾಯಾಲಯ, ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಅಂತಿಮವಾಗಿ ದೃಢೀಕರಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

17 hours ago

   
Image 1
Image 1
ಬೆಂಗಳೂರು ನಗರ

ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ದೇವನಹಳ್ಳಿ

ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು

ದೇವನಹಳ್ಳಿ:  ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.

ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮೈಸೂರು

ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮೈಸೂರು

ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ

ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ

ಬೆಂಗಳೂರು:  ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ

ಬೆಂಗಳೂರು:  ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ

ಬೆಂಗಳೂರು:  ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ

ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1