ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲಿಗೆ ನಕಲಿ ವಾಸುದಾರರನ್ನು ಸೃಷ್ಟಿ ಮಾಡಿ ಅಮಾಯಕರಿಗೆ ಜಮೀನು ಅಥವಾ ಖಾಲಿ ನಿವೇಶನಗಳನ್ನು ಮಾರಾಟ ಮಾಡುವ ಜಾಲ ನಾಯಿ ಕೊಡೆಗಳಂತೆ ಎದ್ದು ನಿಂತಿವೆ. ಹಾಗಾಗಿ ಆಸ್ತಿ ಮಾಲೀಕರು ಎಚ್ಚೆತ್ತುಕೊಳ್ಳುವ ಅವಶ್ಯಕತೆ ತುಂಬಾ ಇದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸದ್ದಿಲ್ಲದೆ ಭೂಮಿ ಲಪಟಾಯಿಸುತ್ತಿದ್ದ ಖತರ್‌ನಾಕ್ ಭೂಗಳ್ಳರ ತಂಡವೊಂದನ್ನು ವಿಜಯಪುರ ಪೊಲೀಸರು ಬಯಲಿಗೆಳೆದಿದ್ದಾರೆ.

 

ಬರೋಬ್ಬರಿ 200 ಜನರ ಗ್ಯಾಂಗ್ ಸೇರಿಕೊಂಡು ಹಗಲು ದರೋಡೆಗೆ ಇಳಿದಿದೆ. ಇತ್ತೀಚಿನ ತನಿಖೆಯಲ್ಲಿ ತಿಳಿದುಬಂದಿರುವ ಸತ್ಯ ಕೇಳಿದರೆ ಬೆಚ್ಚಿ ಬೀಳುತ್ತೀರಿ. ಈ ಖದೀಮರ ತಂಡ ಇದುವರೆಗೆ ಬರೋಬ್ಬರಿ 158 ಎಕರೆ ಜಮೀನು ಮತ್ತು 9 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದೆ ಎಂಬುದು ಪೊಲೀಸರ ತನಿಖೆ ವೇಳೆ ಬಹಿರಂಗಗೊಂಡಿದೆ‌. ನಿರ್ಲಕ್ಷಿತರು, ಬಡವರು, ಏಕಾಂಗಿಯಾಗಿ ವಾಸಿಸುವ ವೃದ್ಧರು ಹಾಗೂ ಯಾವುದೇ ಬೆಂಬಲವಿಲ್ಲದ ಅಮಾಯಕರನ್ನೇ ಗುರಿ ಮಡಿಕೊಂಡಿರುವ ಈ ತಂಡ,

 

ಅವರಿಗೆ ಧನಸಹಾಯದ ಆಮಿಷವೊಡ್ಡಿ ಅವರಿಂದ ಆಧಾರ್ ಕಾರ್ಡ್ ಪಡೆದು, ಅದರಲ್ಲಿನ ಫೋಟೋ ಅಥವಾ ಹೆಸರನ್ನು ತಿದ್ದುಪಡಿ ಮಾಡುತ್ತಿದ್ದರು. ಬಳಿಕ ಮೂಲ ಮಾಲೀಕರ ಹೆಸರಿಗೆ ತಮ್ಮ ತಂಡದವರನ್ನೇ ನಕಲಿ ವಾರಸುದಾರರನ್ನಾಗಿ ಸೃಷ್ಟಿಸಿ, ಪಹಣಿಯಲ್ಲಿ (RTC) ಹೆಸರು ಬದಲಾಯಿಸಿ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ವಂಚನೆ ಜಾಲವನ್ನು ಪತ್ತೆಹಚ್ಚಿರುವ ವಿಜಯಪುರ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಇದರ ಹಿಂದೆ ಇನ್ನೂ ಹಲವು ಪ್ರಭಾವಿಗಳಿರುವ ಶಂಕೆ ವ್ಯಕ್ತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಚಿಕ್ಕೋಡಿ

ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ

ಚಿಕ್ಕೋಡಿ:  ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ನಂಜನಗೂಡು

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ತುಮಕೂರು

ಕುಣಿಗಲ್

ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!

ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಕೊಪ್ಪಳ

ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳ  :  ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1