ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಬೈಕ್ ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಸಿದ್ದಾರೆ.

 

ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ದಿನನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೆ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿದ್ದು, ಇಂದು ಜಮೀನಿಗೆ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಕೂಡಲೇ ಚಿರತೆಯನ್ನು ಬೋನು ಇಟ್ಟು ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಲ್ಯಾಣ ಸಂಘದ ರೈತರು ಒತ್ತಾಯಿಸಿದ್ದಾರೆ..


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಬೀದರ್

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ

ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ


Edited by: ಬಾನು

59 minutes ago

   
Image 1
ಕೋಲಾರ

ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು

ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ‌: ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಕೊಪ್ಪಳ

ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ

ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ವಿಜಯಪುರ

ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1