ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ
ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್ಲಿ ನಡೆದ ದಲ್ರಾಮ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಏಪ್ರಿಲ್ 3ರ ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ದಲ್ರಾಮ್ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಬಂಧಿತ ಆರೋಪಿಗಳನ್ನು ರಘುನಾಥ್ ಪಟೇಲ್, ಮಹೇಂದ್ರ ಪಟೇಲ್, ಶರವಣ ಪಟೇಲ್ ಹಾಗೂ ಜೀತು ಪಟೇಲ್ ಎಂದು ಗುರುತಿಸಲಾಗಿದೆ. ಪೊಲೀಸರ ತನಿಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ಸಂಗತಿಗಳು ಬಹಿರಂಗವಾಗಿವೆ. ಮೃತ ದಲ್ರಾಮ್ ತನ್ನ ಊರಿನಲ್ಲಿ ಆರೋಪಿಗಳಿಗೆ ನಿರಂತರ ಕಾಟ ನೀಡುತ್ತಿದ್ದನು ಎನ್ನಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ದರೋಡೆ ನಡೆಸುತ್ತಿದ್ದನೆಂಬ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆ ದಲ್ರಾಮ್ ಮತ್ತು ಆರೋಪಿಗಳ ನಡುವೆ ದೀರ್ಘಕಾಲದಿಂದ ವೈಷಮ್ಯ ಇತ್ತು. ಎರಡು ವರ್ಷಗಳ ಹಿಂದೆ ರಾಜಸ್ಥಾನದಲ್ಲಿ ದಲ್ರಾಮ್ ವಿರುದ್ಧ ದೂರು ನೀಡಿದ್ದರೂ, ವೈಷಮ್ಯ ತಗ್ಗದೆ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ದಲ್ರಾಮ್ ಬೆಂಗಳೂರಿಗೆ ಬಂದಿದ್ದನು. ಆತ ತಮ್ಮ ಮೇಲೆ ದಾಳಿ ನಡೆಸಬಹುದು ಎಂಬ ಭೀತಿಯಿಂದ ಆರೋಪಿಗಳು ಮುಂಚಿತವಾಗಿಯೇ ಯೋಜನೆ ರೂಪಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಘಟನೆ ದಿನ, ದಲ್ರಾಮ್ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆರೋಪಿಗಳು ಅವನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ವರ್ತೂರು ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು
ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ
ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ
ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ
ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!
ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ
ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ
ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ
ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ
ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?
ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ
7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ
ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ
ನರಸಿಂಹರಾಜಪುರ
ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ
ದಲಿತ ಸ್ವಾಮೀಜಿಗೆ ದೌರ್ಜನ್ಯ ಆರೋಪ: ದೇವಸ್ಥಾನದಲ್ಲೇ ಎಳೆದಾಡಿ ಹಲ್ಲೆ!
ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ದಲ... ಓದನ್ನು ಮುಂದುವರಿಸಿ