“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ
ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಉಪಚುನಾವಣೆ ಹಿನ್ನೆಲೆ ಬಿಜೆಪಿ ಮಹಿಳಾ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯರು ಭಯದಿಂದ ಬದುಕುತ್ತಿದ್ದಾರೆ ಎಂದು ಟೀಕಿಸಿದರು.
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಉಲ್ಲೇಖಿಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಮಹಿಳೆಯರು ಭಯಮುಕ್ತವಾಗಿ ಬದುಕಲು ಸರ್ಕಾರ ಬದಲಾವಣೆ ಅಗತ್ಯ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಗೃಹ ಲಕ್ಷ್ಮೀ ಯೋಜನೆ ಕುಟುಂಬಗಳಲ್ಲಿ ಭಿನ್ನಾಭಿಪ್ರಾಯ ಉಂಟುಮಾಡುತ್ತಿದೆ ಎಂದು ಟೀಕಿಸಿದರು. ಬಸ್ ಪ್ರಯಾಣ ಸೇರಿದಂತೆ ಹಲವು ವಿಷಯಗಳಲ್ಲಿ ಮಹಿಳೆಯರಿಗೆ ತೊಂದರೆ ಉಂಟಾಗಿದೆ ಎಂದು ಹೇಳಿದರು.
ಮಹಿಳಾ ಮೀಸಲಾತಿ ವಿಷಯವನ್ನು ಉಲ್ಲೇಖಿಸಿದ ಅವರು, ನರೇಂದ್ರ ಮೋದಿ ಸರ್ಕಾರ ಮಹಿಳೆಯರಿಗೆ ನ್ಯಾಯ ನೀಡಿದೆಯೆಂದು ಹೇಳಿದರು. ತ್ರಿಪಲ್ ತಲಾಖ್ ರದ್ದುಪಡಿಸಿರುವುದನ್ನು ಉದಾಹರಣೆಯಾಗಿ ನೀಡಿದರು. ಮಹಿಳೆಯರ ಸುರಕ್ಷತೆ ಮತ್ತು ಗೌರವವನ್ನು ಕಾಪಾಡುವಲ್ಲಿ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದ ಅವರು, ತಮ್ಮ ಮುಖ್ಯಮಂತ್ರಿತ್ವ ಅವಧಿಯಲ್ಲಿ ಮಹಿಳಾ ಸಂಘಗಳಿಗೆ ನೆರವು ನೀಡಿದ ಯೋಜನೆಗಳನ್ನು ಸ್ಮರಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ ಅವರು, ಇದರಿಂದ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕರ್ನಾಟಕಕ್ಕೆ ಕೇಂದ್ರ ಅನ್ಯಾಯ – ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾ... ಓದನ್ನು ಮುಂದುವರಿಸಿ
“ಜನರ ಪ್ರೀತಿಯೇ ದೊಡ್ಡ ಗೌರವ” – ಡಾಕ್ಟರೇಟ್ ತಿರಸ್ಕರಿಸಿದ ಬೊಮ್ಮಾಯಿ
ಬೆಂಗಳೂರು: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಸವರಾ... ಓದನ್ನು ಮುಂದುವರಿಸಿ
“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ
ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ
ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ
ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ
ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ
ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ
ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ
“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ
ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ
ಮಡಿಕೇರಿ
ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕ... ಓದನ್ನು ಮುಂದುವರಿಸಿ
ಆಧಾರಿತ RF ಟೆಕ್ : ಬೆಂಗಳೂರಿನ ಸ್ಟಾರ್ಟ್‌ಅಪ್‌ನಿಂದ ‘ಡಾರ್ಕ್ ಶಿಪ್ಪಿಂಗ್’ ಪತ್ತೆ ಮಾಡುವ ಹೊಸ ತಂತ್ರಜ್ಞಾನ
ಬೆಂಗಳೂರು: ಪಶ್ಚಿಮ ಏಷ್ಯಾ ಸಂಕಷ್ಟದ ನಡುವೆ ಕಳ್ಳ ಸಾಗಣೆ, ಅಕ್ರಮ... ಓದನ್ನು ಮುಂದುವರಿಸಿ
IndiGo ವಿಮಾನದಲ್ಲಿ ‘ಬಾಂಬ್’ ಸಂದೇಶ: 183 ಪ್ರಯಾಣಿಕರ ತುರ್ತು ಇಳಿಕೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು... ಓದನ್ನು ಮುಂದುವರಿಸಿ