ಬಿಜೆಪಿಗೆ ತಿರುಗೇಟು: ‘ತಪ್ಪೊಪ್ಪಿಕೊಂಡು ಕ್ಷಮೆ ಕೇಳಲಿ’ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಗೆಲುವು ಸಾಧಿಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಳೆದ ಚುನಾವಣೆಯಿಗಿಂತ ಈ ಬಾರಿ ಹೆಚ್ಚು ಮತಗಳು ಕಾಂಗ್ರೆಸ್ ಪರವಾಗಿ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚಿನ ಅಂತರದಲ್ಲಿ ಗೆಲ್ಲಲಿದ್ದಾರೆ” ಎಂದರು.

 

ಉಪಚುನಾವಣೆ ಪ್ರಚಾರದ ಕುರಿತು ಮಾತನಾಡಿದ ಶಿವಕುಮಾರ್, “ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಪ್ರಚಾರ ನಡೆಸಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತಿದ್ದಾರೆ. ಕಳೆದ ಬಾರಿ ಬಿಜೆಪಿಗೆ ಮತಹಾಕಿದ್ದವರೂ ಸಹ ಈ ಬಾರಿ ಕಾಂಗ್ರೆಸ್ ಪರ ಮತ ಹಾಕುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

 

“ಬೆಲೆ ಏರಿಕೆಯ ಈ ಸಮಯದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಹಾಯವಾಗುತ್ತಿವೆ ಎಂಬುದನ್ನು ಜನರು ಅರಿತಿದ್ದಾರೆ. ಈ ಯೋಜನೆಗಳನ್ನು ಮುಂದುವರಿಸಲು ಜನರು ನಿರ್ಧರಿಸಿದ್ದಾರೆ” ಎಂದು ಅವರು ಹೇಳಿದರು. ಕೇರಳ ಚುನಾವಣಾ ಪ್ರಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಎರಡು ದಿನಗಳ ಕಾಲ ಕೇರಳಕ್ಕೆ ತೆರಳಿ ಪ್ರಚಾರ ನಡೆಸಿ, ಬಳಿಕ ಮತ್ತೆ ರಾಜ್ಯದ ಉಪಚುನಾವಣೆ ಕ್ಷೇತ್ರಗಳಿಗೆ ಬರುತ್ತೇನೆ” ಎಂದರು.

 

ರಾಜ್ಯದಲ್ಲಿ ಗ್ಯಾಸ್ ಅಭಾವದ ಕುರಿತು ಮಾತನಾಡಿದ ಅವರು, “ಗ್ಯಾಸ್ ಕೊರತೆಯಿಂದ ಆಟೋ ಚಾಲಕರು ಹಾಗೂ ಹೋಟೆಲ್ ಕ್ಷೇತ್ರಕ್ಕೆ ತೊಂದರೆಯಾಗುತ್ತಿದೆ. ಇದು ಸಂಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ. ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು. “ಅನಿಲ ಪೂರೈಕೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಈ ವಿಷಯದಲ್ಲಿ ಸೂಕ್ತ ನೀತಿ ರೂಪಿಸಲು ವಿಫಲವಾಗಿರುವ ಕೇಂದ್ರ ಸರ್ಕಾರ, ಜನರ ಮುಂದೆ ತಪ್ಪೊಪ್ಪಿಕೊಂಡು ಕ್ಷಮೆ ಕೇಳಬೇಕು” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಒಟ್ಟಿನಲ್ಲಿ, ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕತ್ವ ಆತ್ಮವಿಶ್ವಾಸ ವ್ಯಕ್ತಪಡಿಸುತ್ತಿದ್ದು, ರಾಜಕೀಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ವಿಜಯಪುರ

“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ

ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ರಾಮನಗರ

ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ

ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬಾಗಲಕೋಟೆ

“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ

ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಾವಣಗೆರೆ

ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬಾಗಲಕೋಟೆ

ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬಾಗಲಕೋಟೆ

“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ

ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಕೊಡಗು

ಮಡಿಕೇರಿ

ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ

ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಆಧಾರಿತ RF ಟೆಕ್ : ಬೆಂಗಳೂರಿನ ಸ್ಟಾರ್ಟ್‌ಅಪ್‌ನಿಂದ ‘ಡಾರ್ಕ್ ಶಿಪ್ಪಿಂಗ್’ ಪತ್ತೆ ಮಾಡುವ ಹೊಸ ತಂತ್ರಜ್ಞಾನ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಕಷ್ಟದ ನಡುವೆ ಕಳ್ಳ ಸಾಗಣೆ, ಅಕ್ರಮ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

IndiGo ವಿಮಾನದಲ್ಲಿ ‘ಬಾಂಬ್’ ಸಂದೇಶ: 183 ಪ್ರಯಾಣಿಕರ ತುರ್ತು ಇಳಿಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಶಿವಮೊಗ್ಗ

ತೀರ್ಥಹಳ್ಳಿ

ತೋಟದ ನಾಡಬಾಂಬ್ ಮನೆ ಅಂಗಳದಲ್ಲಿ ಸ್ಫೋಟ: ವೃದ್ಧೆ ಗಾಯ

ಶಿವಮೊಗ್ಗ: ನಾಡಬಾಂಬ್ ಸ್ಫೋಟಗೊಂಡ ಪರಿಣಾಮ ವೃದ್ಧೆಯೊಬ್ಬರು ಗಂಭೀರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1