ಡಿಜೆ ಹಳ್ಳಿ ಬೆಂಕಿ ಅವಘಡ: ಆರು ಹಸುಗಳ ಸಜೀವ ದಹನ ಪ್ರಕರಣದಲ್ಲಿ ಆರೋಪಿ ಬಂಧನ
ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಭೀಕರ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದುರಂತದಲ್ಲಿ ಆರು ಹಸುಗಳು ಸಜೀವವಾಗಿ ದಹನಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಬಂಧಿತನನ್ನು ಇರ್ಫಾನ್ ಪಾಷ ಎಂದು ಗುರುತಿಸಲಾಗಿದ್ದು, ಆತ ಕೆಜಿ ಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ನಡೆದ ರಾತ್ರಿ ವೇಳೆ ಆತ ಒಬ್ಬಂಟಿಯಾಗಿ ಸಂಚರಿಸುತ್ತಿದ್ದನೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಪ್ರಾಥಮಿಕ ವಿಚಾರಣೆಯಲ್ಲಿ, ನಾಯಿಗಳಿಂದ ಬೆದರಿಕೆ ಎದುರಾದ ಹಿನ್ನೆಲೆಯಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೊಂಡಿದ್ದಾನೆ. ತನ್ನ ಉದ್ದೇಶ ಹಾನಿ ಮಾಡುವುದು ಅಲ್ಲವೆಂದು ಸ್ಪಷ್ಟಪಡಿಸಿದ್ದಾನೆ.
ಆದರೆ ಪ್ರಕರಣಕ್ಕೆ ಹೊಸ ತಿರುವು ನೀಡಿರುವುದು ಸಿಸಿಟಿವಿ ದೃಶ್ಯಗಳು. ಅವುಗಳಲ್ಲಿ ಆರೋಪಿ ಕುಳಿತು ಬೆಂಕಿ ಹಚ್ಚಿ, ನಂತರ ಶಾಂತವಾಗಿ ಸ್ಥಳದಿಂದ ತೆರಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದರಿಂದ ಆರೋಪಿಯ ಹೇಳಿಕೆಯಲ್ಲಿ ಅನುಮಾನಗಳು ವ್ಯಕ್ತವಾಗಿವೆ. ಇದಲ್ಲದೆ, ಆರೋಪಿ ಮುಖ ಮುಚ್ಚಿಕೊಂಡೇ ಬೆಂಕಿ ಹಚ್ಚಿ ತೆರಳಿರುವುದು ಕೂಡ ಬೆಳಕಿಗೆ ಬಂದಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಡಿಜೆ ಹಳ್ಳಿ ಪೊಲೀಸರು ಪ್ರಕರಣದ ಕುರಿತು ತೀವ್ರ ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ, ನಿರ್ಲಕ್ಷ್ಯದಿಂದ ನಡೆದ ಈ ಕೃತ್ಯ ನಿರಪರಾಧ ಪ್ರಾಣಿಗಳ ಜೀವಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತ... ಓದನ್ನು ಮುಂದುವರಿಸಿ
ಮದ್ದೂರು
ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು
ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ
ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ
ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗು... ಓದನ್ನು ಮುಂದುವರಿಸಿ
ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ
ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ
“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್
ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂ... ಓದನ್ನು ಮುಂದುವರಿಸಿ
6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡ... ಓದನ್ನು ಮುಂದುವರಿಸಿ
‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ
ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ
ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು
ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ