ಎಲ್‌ಪಿಜಿ ಅಭಾವದ ಹೊಡೆತ – ಸಂಕಷ್ಟದಲ್ಲಿ ಆಟೋ ಚಾಲಕರು, ಸರ್ಕಾರಕ್ಕೆ ಬಂದ್ ಎಚ್ಚರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷದ ನಡುವೆಯೇ ರಾಜ್ಯದಲ್ಲಿ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಇದರ ನೇರ ಪರಿಣಾಮ ಆಟೋ ಚಾಲಕರ ಬದುಕಿನ ಮೇಲೆ ಬಿದ್ದಿದೆ. ನಗರದಲ್ಲಿ ಎಲ್‌ಪಿಜಿ ಅಭಾವ ಹೆಚ್ಚಾದ ಹಿನ್ನೆಲೆ ಆಟೋ ಚಾಲಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನನಿತ್ಯದ ಜೀವನ ನಡೆಸುವುದೇ ಕಷ್ಟಕರವಾಗಿದ್ದು, ಆದಾಯವೂ ಕುಂಠಿತವಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ. ಈ ಗಂಭೀರ ಸಮಸ್ಯೆಗೆ ಸ್ಪಂದಿಸಬೇಕಿದ್ದ ಸರ್ಕಾರದ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

 

ಇದರಿಂದ ಕೋಪಗೊಂಡ ಆಟೋ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿವೆ. ಸಭೆ ನಡೆಸಿದ ಸಂಘಟನೆಗಳು, ಸಮಸ್ಯೆಗೆ ತಕ್ಷಣ ಪರಿಹಾರ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಉಪಚುನಾವಣೆ ಹಾಗೂ ಐಪಿಎಲ್ ವ್ಯಸ್ತತೆಯಲ್ಲಿ ಸರ್ಕಾರ ಸಮಯ ಕಳೆಯುತ್ತಿದೆ ಎಂಬ ಟೀಕೆ ಕೂಡ ಕೇಳಿಬಂದಿದೆ. ಸಿಎಂ, ಡಿಸಿಎಂ ಸೇರಿದಂತೆ ಸಂಬಂಧಿತ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಂಘಟನೆಗಳು ನಿರ್ಧರಿಸಿವೆ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಚಾಲಕರಿಗೆ ತಕ್ಷಣ ನೆರವು ನೀಡಬೇಕು. ಜೊತೆಗೆ ಮಕ್ಕಳ ಶಾಲಾ ಶುಲ್ಕ ಪಾವತಿಗೆ ಕನಿಷ್ಠ ಎರಡು ತಿಂಗಳಾವಧಿ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

 

ಈ ವಾರದೊಳಗೆ ಸರ್ಕಾರದಿಂದ ಸ್ಪಷ್ಟ ಸ್ಪಂದನೆ ಸಿಗದಿದ್ದರೆ ಸಚಿವರ ಮನೆಗಳಿಗೆ ಮುತ್ತಿಗೆ ಹಾಕುವುದರ ಜೊತೆಗೆ ಆಟೋ-ಟ್ಯಾಕ್ಸಿ ಬಂದ್‌ಗೆ ಕರೆ ನೀಡುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ. ಒಟ್ಟಾರೆ, ಎಲ್‌ಪಿಜಿ ಕೊರತೆ ಸಮಸ್ಯೆ ಗಂಭೀರವಾಗುತ್ತಿದ್ದು, ಸರ್ಕಾರ ಮತ್ತು ಆಟೋ ಚಾಲಕರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

19 minutes ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

26 minutes ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ವಿಜಯನಗರ

ಕೂಡ್ಲಿಗಿ

ಬೀದಿ ನಾಯಿಯ ಅಟ್ಟಹಾಸ – 3 ವರ್ಷದ ಬಾಲಕಿ ಸೇರಿ ಐವರಿಗೆ ಗಾಯ, ಆತಂಕದಲ್ಲಿ ನಾಗರೀಕರು

ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬೀದಿ ನಾಯಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

ಉಪಚುನಾವಣೆ ಕಾವು ತಾರಕ್ಕೇರಿತು – ಇಂದು ಪ್ರಚಾರಕ್ಕೆ ತೆರೆ, ಅಂತಿಮ ಕಸರತ್ತು ಜೋರಾಗಿ!

ದಾವಣಗೆರೆ/ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1