ಗುಡಿಬಂಡೆ ತಾಲೂಕು ಕೆಡಿಪಿ ಸಭೆ: ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಶಾಸಕ ಸುಬ್ಬಾರೆಡ್ಡಿ ಸೂಚನೆ

ಗುಡಿಬಂಡೆ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಸುಬ್ಬಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ (ತಾಲೂಕು ಅಭಿವೃದ್ಧಿ ಕಾರ್ಯಕ್ರಮಗಳ) ಪ್ರಗತಿ ಪರಿಶೀಲನಾ ಸಭೆಯು ಜರುಗಿತು. ತಾಲೂಕಿನ ವಿವಿಧ ಇಲಾಖೆಗಳ ಕಾರ್ಯವೈಖರಿಯನ್ನು ಪರಾಮರ್ಶಿಸಿದ ಶಾಸಕರು, ಅಭಿವೃದ್ಧಿ ಕೆಲಸಗಳಲ್ಲಿ ವಿಳಂಬ ಧೋರಣೆ ತೋರದೆ ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

 

​ಜಿಲ್ಲಾ ಪಂಚಾಯತ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಈಗಾಗಲೇ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು ಎಂದು ನಿರ್ದೇಶಿಸಿದರು. ತಾಲೂಕು ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅಂತಹ ರಸ್ತೆಗಳ ಸಮಗ್ರ ಪಟ್ಟಿಯನ್ನು ತಯಾರಿಸಿ ತಕ್ಷಣವೇ ತಮಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

 

​ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಗ್ಗೆ ಮಾಹಿತಿ ಪಡೆದ ಅವರು, ತಾಲೂಕಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ತೀವ್ರ ಸಮಸ್ಯೆಯಿಲ್ಲ ಹಾಗೂ ಲಭ್ಯವಿರುವ ಮೂಲಗಳಿಂದಲೇ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು. ತಾಲೂಕಿನಲ್ಲಿರುವ ಒಟ್ಟು 117 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 100 ಘಟಕಗಳು ಸುಸ್ಥಿತಿಯಲ್ಲಿದ್ದು, ಉಳಿದ 17 ಘಟಕಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಅಧಿಕಾರಿ ನವೀನ್ ಅವರು ಹೊಸದಾಗಿ 8 ಗ್ರಾಮಗಳಿಗೆ ನೀರಿನ ಘಟಕಗಳ ಅಗತ್ಯವಿದೆ ಎಂದು ಸಭೆಯ ಗಮನಕ್ಕೆ ತಂದಾಗ, ತಾಲೂಕಿನ ಎಲ್ಲಾ ಗ್ರಾಮಗಳಿಗೂ ಹೊಸ ಘಟಕಗಳ ಸ್ಥಾಪನೆಗೆ ಅಗತ್ಯ ಅನುದಾನ ನೀಡುವುದಾಗಿ ಶಾಸಕರು ಭರವಸೆ ನೀಡಿದರು.

 

​ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟದ ಕುರಿತು ಮಾತನಾಡಿದ ಶಾಸಕರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು. ಇತ್ತೀಚೆಗೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಆಹಾರ ಧಾನ್ಯಗಳ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಬಡ ಮಕ್ಕಳ ಪಾಲಿನ ಆಹಾರವನ್ನು ಕದಿಯುವ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಿಕ್ಷೆ ಖಂಡಿತ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದರು.

 

​ಶಿಕ್ಷಣ ಇಲಾಖೆಯ ಪ್ರಗತಿಯ ಬಗ್ಗೆ ಚರ್ಚಿಸಿದ ಶಾಸಕರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗುಡಿಬಂಡೆ ತಾಲೂಕು ಉತ್ತಮ ಫಲಿತಾಂಶ ದಾಖಲಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ತಿಳಿಸಿದರು. ಈಗಾಗಲೇ ನಡೆದ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಸಮಾಧಾನಕರ ಸಂಗತಿಯಾಗಿದ್ದು, ಪಟ್ಟಣದ ಪಿ.ಎಂ. ಶ್ರೀ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲು ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

 

​ಇನ್ನು ಕೃಷಿ ಇಲಾಖೆಯಡಿ ರೈತರಿಗೆ ದೊರೆಯುವ ಸರ್ಕಾರಿ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳ ಅಥವಾ ಸಂಘ-ಸಂಸ್ಥೆಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಜನಪ್ರತಿನಿಧಿಗಳ ಸಮ್ಮುಖದಲ್ಲೇ ಸೌಲಭ್ಯಗಳನ್ನು ವಿತರಿಸಬೇಕು ಎಂದು ಸೂಚನೆ ನೀಡಿದರು. ಕೊನೆಯದಾಗಿ, ಗ್ರಾಮಗಳಲ್ಲಿ ಮನೆಗಳ ಮೇಲೆ ಅಪಾಯಕಾರಿಯಾಗಿ ಜೋತು ಬೀಳುತ್ತಿರುವ ವಿದ್ಯುತ್ ತಂತಿಗಳು ಹಾಗೂ ಹಳೆಯ ಸ್ಟೀಲ್ ಕಂಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಸಮಗ್ರ ಸರ್ವೇ ನಡೆಸಿ ಕ್ರಮ ಕೈಗೊಳ್ಳುವಂತೆ ಕೆಇಬಿ ಅಧಿಕಾರಿಗಳಿಗೆ ಶಾಸಕ ಸುಬ್ಬಾರೆಡ್ಡಿ ಅವರು ಆದೇಶಿಸಿದರು.

 

ವರದಿ ಮೊಹಮ್ಮದ್ ನಾಸೀರ್ ಗುಡಿಬಂಡೆ


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ಚುನಾಯಿತರ ಅಧಿಕಾರ ಅವಧಿ ಮುಗಿದ ಹಿನ್ನೆಲೆ-ಬೆಂಗಳೂರು ಗ್ರಾಮಾಂತರ 93 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳು ನೇಮಕ

ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯಿತಿ ಚುನಾವಣೆಗೆ ಕಹಳೆ: 2026ರ ಚುನಾವಣೆಗೆ ಸಿದ್ಧತೆ ಆರಂಭಿಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ...!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಕ್ಷಿಣಕನ್ನಡ

ಕಡಬ ತಾಲೂಕು

ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ

ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಯಲಹಂಕ

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಳಗಾವಿ

ಕಿತ್ತೂರು

ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ

ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಉಡುಪಿ

ಕಾರ್ಕಳ

ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್‌ ನಿರ್ಮಾಣ – ಗ್ರಾಮಸ್ಥರ ಆಕ್ರೋಶ

ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಗದಗ

ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ

ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಚಾಮರಾಜನಗರ

ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ

ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1