ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ಮುಂದೂಡಿದೆ. ಸ್ವತಂತ್ರ ಅಭ್ಯರ್ಥಿ ಗೌತಮ್ ಕುಮಾರ್ ಯು. ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು, ಕಳೆದ ಆರು ತಿಂಗಳಿಂದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೆ ಇದ್ದು, ಇದೀಗ ಉಪಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ ಎಂದು ವಾದಿಸಿದರು. ನೀತಿ ಸಂಹಿತೆ ಜಾರಿಯಾದ ನಂತರ ಹಣ ಬಿಡುಗಡೆ ಮಾಡುವುದು ತಪ್ಪು ಎಂದು ಹೇಳಿ, ಉಪಚುನಾವಣೆ ಮುಗಿಯುವವರೆಗೆ ಗೃಹಲಕ್ಷ್ಮಿ ಸೇರಿದಂತೆ ಯಾವುದೇ ಯೋಜನೆಗಳ ಹಣ ಬಿಡುಗಡೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಎಲ್ಲಾ ಯೋಜನೆಗಳಿಗೆ ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡಲಾಗಿದೆ. ಕೆಲ ತಿಂಗಳಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದರೂ ಯಾವುದೇ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಜಿದಾರರು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ, ಅರ್ಜಿಯನ್ನು ವಜಾಗೊಳಿಸಿ ದಂಡ ವಿಧಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಎರಡೂ ವಾದಗಳನ್ನು ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಮುಂದುವರಿಯುತ್ತಿವೆ ಎಂದು ಗಮನಿಸಿದಿತು. ಈ ಹಂತದಲ್ಲಿ ನ್ಯಾಯಾಲಯದಿಂದ ಯಾವುದೇ ಆದೇಶ ನೀಡಿದರೆ ಬಡ ಹಾಗೂ ಹಿಂದುಳಿದ ವರ್ಗಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ
ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು
ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ
ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ
ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ
“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ
ಕಾರ್ಕಳ
ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ
ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ