ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ ದರೋಡೆಯೊಂದು ಸಂಭವಿಸಿದೆ. ಸಿನಿಮಾ ಮಾದರಿಯಲ್ಲಿ ಯುವಕನೊಬ್ಬನ ಅಡ್ಡಗಟ್ಟಿದ ನಾಲ್ವರ ಗ್ಯಾಂಗ್, ಬರೋಬ್ಬರಿ 31 ಲಕ್ಷ ರೂಪಾಯಿಗೂ ಅಧಿಕ ಹಣದೊಂದಿಗೆ ಪರಾರಿಯಾದ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೈಲಾಸ್ ಎಂಬ ಯುವಕ ರಾಕೇಶ್ ಎಂಬುವವರ ಬಳಿ ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಈತನ ಕೆಲಸ ಉಡಾನ್ (Udaan) ಕಂಪನಿಯ ವಿವಿಧ ಬ್ರಾಂಚ್‌ಗಳಿಗೆ ಭೇಟಿ ನೀಡಿ ಹಣವನ್ನು ಸಂಗ್ರಹಿಸುವುದಾಗಿತ್ತು. ಎಂದಿನಂತೆ ನಿನ್ನೆ (ಭಾನುವಾರ) ಸಂಜೆ ಕೂಡ ಕೈಲಾಸ್ ವಿವಿಧ ಬ್ರಾಂಚ್‌ಗಳಿಂದ ಒಟ್ಟು 31,38,625 ರೂಪಾಯಿ ಹಣ ಕಲೆಕ್ಟ್ ಮಾಡಿದ್ದ. ಸಂಗ್ರಹಿಸಿದ ಇಷ್ಟೂ ಬೃಹತ್ ಮೊತ್ತದ ಹಣವನ್ನು ಕೈಲಾಸ್ ತನ್ನ ಜುಪಿಟರ್ ಸ್ಕೂಟರ್‌ನ ಡಿಕ್ಕಿಯಲ್ಲಿಟ್ಟುಕೊಂಡು ಬನ್ನೇರುಘಟ್ಟ ಸಮೀಪದ ಸಕಲವಾರ ರಸ್ತೆಯಲ್ಲಿ ಸಂಚರಿಸುತ್ತಿದ್ದ. ನಿನ್ನೆ ಸಂಜೆ ಸುಮಾರು 4:20ರ ಸುಮಾರಿಗೆ ಈತ ಸಕಲವಾರ ರಸ್ತೆಯಿಂದ ಬನ್ನೇರುಘಟ್ಟದ ಕಡೆಗೆ ಬರುತ್ತಿದ್ದಾಗ ದರೋಡೆಕೋರರು ಅಟ್ಟಹಾಸ ಮೆರೆದಿದ್ದಾರೆ.

 

ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕೈಲಾಸ್‌ನನ್ನು ಅಡ್ಡಗಟ್ಟಿದ್ದಾರೆ. ಕೈಯಲ್ಲಿದ್ದ ಲಾಂಗ್ (Long) ತೋರಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರರು ಆತನ ಬೆದರಿಸಿ ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾರೆ. ದರೋಡೆ ಮಾಡಿದ ಗ್ಯಾಂಗ್ ಸುಮಾರು ಒಂದು ಕಿಲೋಮೀಟರ್ ದೂರದವರೆಗೆ ಕೈಲಾಸ್‌ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಬಳಿಕ ನಿರ್ಜನ ಪ್ರದೇಶವೊಂದರಲ್ಲಿ ಬೈಕ್ ನಿಲ್ಲಿಸಿ, ಅದರ ಡಿಕ್ಕಿಯಲ್ಲಿದ್ದ 31 ಲಕ್ಷಕ್ಕೂ ಅಧಿಕ ಹಣವನ್ನು ತೆಗೆದುಕೊಂಡು, ಖಾಲಿ ಬೈಕನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದರೋಡೆ ಪ್ರಕರಣ ದಾಖಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕ್ಯಾಷ್ ಕಲೆಕ್ಟಿಂಗ್ ಯುವಕನ ಚಲನವಲನದ ಮೇಲೆ ಮೊದಲೇ ನಿಗಾ ಇಟ್ಟಿದ್ದವರೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಬೆಚ್ಚಿಬಿತ್ತು ಸಿಲಿಕಾನ್‌ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಳಗಾವಿ

ಸವದತ್ತಿ

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"

ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!

ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಾಮರಾಜನಗರ

ಕೊಳ್ಳೇಗಾಲ

ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

ಕೊಳ್ಳೇಗಾಲ : ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1