ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗಾರಿಕೆ ಹೆಸರಿನಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ನಿಯಮಗಳನ್ನು ಮೀರಿ ಹಗಲು-ರಾತ್ರಿ ಮರಳು ಸಾಗಣೆ ನಡೆಸಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಮತ್ತು ಶಿರೋಳ ಗ್ರಾಮಗಳ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಅನುಮತಿ ಇದ್ದರೂ, ಅದರ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದೆ. ನಿಯಮ ಪ್ರಕಾರ 10 ರಿಂದ 12 ಟನ್ ಮರಳಿಗೆ ಮಾತ್ರ ಬಿಲ್ ಮಾಡಲಾಗುತ್ತಿದ್ದರೂ, ವಾಸ್ತವದಲ್ಲಿ 15 ರಿಂದ 18 ಟನ್‌ವರೆಗೆ ಓವರ್‌ಲೋಡ್ ಮಾಡಿ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇದರ ಜೊತೆಗೆ, ಗಣಿಗಾರಿಕೆ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಮತ್ತು ತೂಕ ಮಾಪನ ವ್ಯವಸ್ಥೆ (ವೇ-ಬ್ರಿಡ್ಜ್) ಇಲ್ಲದೆ ನಿಯಂತ್ರಣವಿಲ್ಲದ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ. ನಿಷೇಧವಿದ್ದರೂ ಬೋಟ್ ಬಳಸಿ ಮರಳು ಫಿಲ್ಟರ್ ಮಾಡುತ್ತಿರುವುದು ಮತ್ತೊಂದು ಗಂಭೀರ ವಿಚಾರವಾಗಿದೆ. ಅಚ್ಚರಿಯ ಸಂಗತಿಯೆಂದರೆ, ಈ ಓವರ್‌ಲೋಡ್ ವಾಹನಗಳು ನರಗುಂದ ಪೊಲೀಸ್ ಠಾಣೆ ಮತ್ತು ತಹಶೀಲ್ದಾರ್ ಕಚೇರಿ ಮುಂದೆ ಸಂಚರಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಸನ ಗ್ರಾಮದಲ್ಲಿ ಕೆಲವು ಪಟ್ಟಾ ಜಮೀನುಗಳ ಲೀಜ್ ಅವಧಿ ಮುಗಿದಿದ್ದರೂ, ರಾತ್ರೋರಾತ್ರಿ ಮರಳು ಲೂಟಿ ಮುಂದುವರಿದಿದೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ಗಮನಕ್ಕೂ ಈ ವಿಷಯವನ್ನು ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ, ಮರಳು ಅಕ್ರಮದ ವಿರುದ್ಧ ಜಿಲ್ಲಾಡಳಿತ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ತೆರಿಗೆ ವಂಚನೆ ತಡೆಯಲು ಕಠಿಣ ನಿಗಾವಹಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ
ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ
ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ
ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ
ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ
ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ
ಮಂಗಳೂರು
ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು
ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ
RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ
ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ