ಹಣದ ವಿಚಾರಕ್ಕೆ ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಗಂಡ!
ಬೆಂಗಳೂರು: ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ಪತಿಯೇ ಹೆಂಡತಿಯನ್ನು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಕಾವ್ಯ (34) ಮೃತ ಮಹಿಳೆಯಾಗಿದ್ದು, ಪತಿ ಕರಿಯಪ್ಪ ಆರೋಪಿಯಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕಳೆದ ಒಂದು ವಾರದಿಂದ ದಂಪತಿಗಳ ನಡುವೆ ನಿರಂತರವಾಗಿ ಗಲಾಟೆ ನಡೆಯುತ್ತಿತ್ತು. ನಿನ್ನೆ ಕರಿಯಪ್ಪ ಮನೆಗೆ ಸುಮಾರು 2 ಲಕ್ಷ ರೂಪಾಯಿ ಹಣವನ್ನು ತಂದಿದ್ದು, ಆ ಹಣವನ್ನು ತನ್ನ ಅಣ್ಣನಿಗೆ ನೀಡಬೇಕೆಂದು ಕಾವ್ಯ ಒತ್ತಾಯಿಸಿದ್ದಾಳೆ ಎನ್ನಲಾಗಿದೆ.
ಇದೇ ವಿಚಾರವಾಗಿ ಇಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡ ಕರಿಯಪ್ಪ, ಪತ್ನಿಯ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮೃತ ಕಾವ್ಯ ಮತ್ತು ಕರಿಯಪ್ಪ ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಆಸ್ತಿ ಹಾಗೂ ಹಣಕಾಸು ವಿಚಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲೇ ಆಗಾಗ್ಗೆ ಕಲಹ ನಡೆಯುತ್ತಿತ್ತೆಂದು ತಿಳಿದುಬಂದಿದೆ.
ಕುಟುಂಬವು ಮೂಲತಃ ಬೆಳಗಾವಿ ಜಿಲ್ಲೆಯದ್ದಾಗಿದ್ದು, ಕರಿಯಪ್ಪ ಬೆಂಗಳೂರಿನಲ್ಲಿ ಬಿಲ್ಡರ್ ಮತ್ತು ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದನು. ಘಟನೆಯ ಮಾಹಿತಿ ತಿಳಿದ ತಕ್ಷಣ ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ
ಆನ್‌ಲೈನ್ ಟ್ರೇಡಿಂಗ್ ಮೋಸ: ಪ್ರೀತಿಯಿಂದ ಹಣ ಕಸಿದ ಮಹಿಳೆ
ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಡೆಯುವ ವಂಚನೆ ಪ್ರಕರ... ಓದನ್ನು ಮುಂದುವರಿಸಿ
ಸಾಗರ
ಹಣಕಾಸು ವಿವಾದ: ಹೋಟೆಲ್ ಮಾಲೀಕನಿಂದ ಕಾರ್ಮಿಕನ ಹತ್ಯೆ
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂ... ಓದನ್ನು ಮುಂದುವರಿಸಿ
ಹನೂರು
ಪೋಷಕರ ವಿರೋಧ ತಾಳಲಾರದೆ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್... ಓದನ್ನು ಮುಂದುವರಿಸಿ
ಬಕೆಟ್‌ಗೆ ಬಿದ್ದು ಮಗು ಸಾವು - ಮಗುವಿನ ಅಕಾಲಿಕ ಸಾವು ತಾಳಲಾರದೆ ತಾಯಿ ಆತ್ಮಹತ್ಯೆ
ಬೆಂಗಳೂರು: ನಗರದ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರ... ಓದನ್ನು ಮುಂದುವರಿಸಿ
ಟೆಂಪೋದಲ್ಲೇ ಶವವಾಗಿ ಪತ್ತೆಯಾದ ಚಾಲಕ: ಸಾವಿನ ಸುತ್ತ ಅನುಮಾನಗಳ ಮಳೆ
ಚಿಕ್ಕಬಳ್ಳಾಪುರ: ಬಾಡಿಗೆಗೆ ತೆರಳಿದ ಟೆಂಪೋ ಚಾಲಕನೊಬ್ಬ, ತನ್ನದೇ... ಓದನ್ನು ಮುಂದುವರಿಸಿ
ಕಾಫಿ ಶಾಪ್ ಬಳಿ ಡ್ರಗ್ಸ್ ಆರೋಪ: ಸಿಬ್ಬಂದಿ-ಯುವಕರ ನಡುವೆ ಭಾರಿ ಗಲಾಟೆ
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಸಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ
ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ