ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!
ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನಡೆದಿದ್ದು, ನಡು ರಸ್ತೆಯಲ್ಲೇ ಗುಂಪುಗಳು ಮಚ್ಚು ಹೊಡೆದಾಡಿಕೊಂಡ ಶಾಕಿಂಗ್ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬಿದನಗೆರೆ ಗ್ರಾಮದ ಜಗದೀಶ್ ಎಂಬಾತ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ವಾಸಿ ಮಂಜುನಾಥ್ ಎಂಬವನ ತಂಗಿಯನ್ನು ಪ್ರೀತಿಸುತ್ತಿದ್ದ. ಕಳೆದ ಮೂರು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಮಂಜುನಾಥ್ ಗೆ ಗೊತ್ತಾಗಿ, ಗಲಾಟೆ ನಡೆದಿದೆ.
ನಿನ್ನೆ ಬೆಳಗ್ಗೆ ಕುಣಿಗಲ್ ಪಟ್ಟಣದಲ್ಲಿ ಎರಡು ಕಡೆಯಿಂದ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಆದರೆ ನ್ಯಾಯ ಪಂಚಾಯ್ತಿ ಬಗೆಹರಿದಿರಲಿಲ್ಲ. ಬಳಿಕ ಯುವತಿಯ ಸಹೋದರ ಮಂಜುನಾಥ್ ಹಾಗೂ ಆತನ ಸ್ನೇಹಿತರು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಯುವತಿಯನ್ನು ಲವ್ ಮಾಡುತ್ತಿದ್ದ ಜಗದೀಶ್ ಹಾಗೂ ಆತನ ಸ್ನೇಹಿತ ವಿಜಯ್ ಹಲ್ಲೆಗೆ ಮುಂದಾಗಿದ್ದಾರೆ.
ಇದರಿಂದ ರೊಚ್ಚಿಗೆದ್ದ ಮಂಜುನಾಥ್ ಹಾಗೂ ಸಹಚರರು ಮಚ್ಚು ತಂದು ಜಗದೀಶ್ ಹಾಗೂ ವಿಜಯ್ ಮೇಲೆ ಮಾರಣಾತಿಂಕ ಹಲ್ಲೆ ನಡೆಸಿದ್ದಾರೆ. ಮಂಜುನಾಥ್ ಹಾಗೂ ಆತನ ಸ್ನೇಹಿತ ನವೀನ್ ನಡು ರಸ್ತೆಯಲ್ಲೇ ಮಚ್ಚು ಬೀಸಿದ್ದಾರೆ. ಗಲಾಟೆಯಲ್ಲಿ ಜಗದೀಶ್ ಹಾಗೂ ವಿಜಯ್‌ಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಗಾಯಳುಗಳಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ
ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ
ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು
ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ : ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ
ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ
ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ
ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ
ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ
ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ
ಗುಡಿಬಂಡಾ
ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ
ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ
ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ
ವಿರಾಜಪೇಟೆ
ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!
ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ
74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು
ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ