ಖರ್ಗೆ ಹೇಳಿಕೆಗೆ ಸಿ.ಟಿ. ರವಿ ಕಿಡಿ: ‘ಮಾನಸಿಕ ಅಸ್ವಸ್ಥತೆ’ ಆರೋಪ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಖರ್ಗೆ ಅವರ ಹೇಳಿಕೆ ಹತಾಶ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು ದಶಕಗಳ ರಾಜಕೀಯ ಅನುಭವ ಹೊಂದಿರುವ ಖರ್ಗೆ ಇಂತಹ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಹೇಳಿದರು. ಇದು ಹಿರಿತನ ಹಾಗೂ ಮುತ್ಸದ್ಧಿತನಕ್ಕೆ ತಕ್ಕದ್ದಲ್ಲ, ದ್ವೇಷದ ಹೇಳಿಕೆಯಾಗಿದೆ ಎಂದು ಟೀಕಿಸಿದರು.
ಗುಜರಾತ್ ಜನರನ್ನು ಅನಕ್ಷರಸ್ಥರು ಎಂದು ಹೇಳುವ ಮೂಲಕ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಕರ್ನಾಟಕದ ಜನರು ಕೂಡ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ, ಹಾಗಾದರೆ ಅವರನ್ನು ಕೂಡ ಅನಕ್ಷರಸ್ಥರು ಎಂದು ಕರೆಯಬೇಕೇ ಎಂದು ಪ್ರಶ್ನಿಸಿದರು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ವಿಷಸರ್ಪಕ್ಕೆ ಹೋಲಿಸಿರುವುದು ಹಾಗೂ ಧಾರ್ಮಿಕ ಪ್ರಚೋದನೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಜಾರಿಯಲ್ಲಿರುವ ದ್ವೇಷ ಭಾಷಣ ಮಸೂದೆ ವ್ಯಾಪ್ತಿಗೆ ಖರ್ಗೆ ಅವರ ಹೇಳಿಕೆ ಬರುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಖರ್ಗೆ ಅವರ ಹೇಳಿಕೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಾಂಗ್ರೆಸ್ ಪಕ್ಷ ಈ ಹೇಳಿಕೆಗೆ ಸ್ಪಷ್ಟನೆ ನೀಡಬೇಕು, ಇಲ್ಲವಾದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ವಿರುದ್ಧವೂ ಟೀಕಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ ಎಂದು ಹೇಳಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ
“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು
ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರ... ಓದನ್ನು ಮುಂದುವರಿಸಿ