ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ
ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜನಿಕ ಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿದ ಪರಿಣಾಮ, ಈ ವರ್ಷವೂ ಕಡತ ವಿಲೇವಾರಿಯಲ್ಲಿ ಶೇಕಡಾ 100 ಸಾಧನೆ ಮಾಡಿದೆ. ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ, ಸಚಿವರ ಸಿಬ್ಬಂದಿ ವಿಶೇಷ ಕಾಳಜಿ ವಹಿಸಿದ್ದಾರೆ. ಬಾಕಿ ಉಳಿದಿದ್ದ ಎಲ್ಲಾ ಕಡತಗಳನ್ನು ಸಮಗ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಹಾಗೂ ಸಮಯಬದ್ಧವಾಗಿ ವಿಲೇವಾರಿ ಮಾಡಲಾಗಿದೆ. ಇದರಿಂದ ಆಡಳಿತದ ದಕ್ಷತೆ ಮತ್ತು ಪಾರದರ್ಶಕತೆ ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಾಗಿದೆ.
ಗಮನಾರ್ಹವಾಗಿ, ಕಳೆದ ಮೂರು ವರ್ಷಗಳಿಂದಲೂ ಕೃಷಿ ಸಚಿವರ ಕಚೇರಿ ನಿರಂತರವಾಗಿ ಶೇಕಡಾ 100 ಕಡತ ವಿಲೇವಾರಿ ಸಾಧನೆ ಮಾಡುತ್ತಿದೆ. ಅನುಭವ ಮತ್ತು ಸೂಕ್ತ ಮಾರ್ಗಸೂಚಿಗಳ ಆಧಾರದಲ್ಲಿ, ಸಮರ್ಪಕ ಯೋಜನೆ ಹಾಗೂ ಪರಿಣಾಮಕಾರಿ ಕಾರ್ಯ ನಿರ್ವಹಣೆಯ ಮೂಲಕ ಈ ಸಾಧನೆ ಸಾಧ್ಯವಾಗಿದೆ. 2025-26ನೇ ಸಾಲಿನಲ್ಲಿ ಒಟ್ಟು 909 ಕಡತಗಳನ್ನು ಪರಿಶೀಲಿಸಿ, ಎಲ್ಲಾ ಕಡತಗಳನ್ನು ಸಮಯಮಿತಿಯಲ್ಲಿ ವಿಲೇವಾರಿ ಮಾಡಲಾಗಿದೆ. ಜೊತೆಗೆ, ಮಾರ್ಚ್ ಅಂತ್ಯದವರೆಗೆ ಸ್ವೀಕರಿಸಿದ 4201 ಪತ್ರಗಳನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ, ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಕೇಳಿದ ಒಟ್ಟು 352 ಪ್ರಶ್ನೆಗಳಿಗೆ ಕೃಷಿ ಇಲಾಖೆ ಸಮರ್ಪಕ ಉತ್ತರ ನೀಡಿದೆ. ಈ ಸಾಧನೆಗೆ ಕಾರಣವಾದ ಸಚಿವರ ಕಚೇರಿಯ ಆಪ್ತ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿಯ ಪರಿಶ್ರಮವನ್ನು ಸಚಿವ ಎನ್. ಚಲುವರಾಯಸ್ವಾಮಿ ಪ್ರಶಂಸಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಕ್ಷಮತೆ ಮತ್ತು ಸಾರ್ವಜನಿಕ ಸ್ನೇಹಿ ಆಡಳಿತವನ್ನು ಮುಂದುವರೆಸುವಂತೆ ಸಚಿವರು ಸೂಚಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು
ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ
ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ
ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ
ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು
ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ
ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು
ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ
ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ
‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ
ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ
ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ
ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ
ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ
ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ
ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು
ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ
ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್
ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ