ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಧಾನ ಮುಖ್ಯಮಂತ್ರಿಯು ಸಿದ್ದರಾಮಯ್ಯ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮುಂದಿನ ಶೈಕ್ಷಣಿಕ ವರ್ಷದಿಂದಲೇ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಜಾರಿಗೆ ಬರಲಿದೆ ಎಂದು ಸಿಎಂ ಘೋಷಿಸಿದ್ದಾರೆ.
ಅದರೊಂದಿಗೆ, ಎಡಿಬಿ (Asian Development Bank) ಸಹಾಯದಿಂದ 40 ಪದವಿ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳ ಉದ್ಯಮಶೀಲತೆಯನ್ನು ಬೆಳೆಸಲು 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳ ಭರ್ತಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ, 31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಪದವಿ ಕಾಲೇಜುಗಳನ್ನು ಉನ್ನತೀಕರಣಗೊಳಿಸುವ ಯೋಜನೆಯನ್ನೂ ಸಿಎಂ ಘೋಷಿಸಿದ್ದಾರೆ. ಈ ಕ್ರಮಗಳಿಂದ ರಾಜ್ಯದ ಉನ್ನತ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಅನುಕೂಲ ಎರಡೂ ಹೆಚ್ಚಾಗುವ ನಿರೀಕ್ಷೆಯಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ
ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ
ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ
ಚಿಕ್ಕೋಡಿ
ಯುಪಿಎಸ್‌ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ
1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ
PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ
ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ
ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ