ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ರಸಪಾಕ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ‘ನಾರಿ ಶಕ್ತಿ’ ಪರವಾಗಿ ಬರೆದಿರುವ ಪತ್ರದಲ್ಲಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಿಲಿಂಡರ್ ಪೂರೈಕೆಯಲ್ಲಿ ಶೇ.50 ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್‌ಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಬೆಲೆ ಏರಿಕೆಯಿಂದ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶವೂ ಕಡಿಮೆಯಾಗಿದ್ದು, ಈ ಉದ್ಯಮವನ್ನು ನಂಬಿಕೊಂಡಿರುವ ಸಾವಿರಾರು ಮಹಿಳಾ ಕಾರ್ಮಿಕರ ಜೀವನೋಪಾಯಕ್ಕೂ ಪರಿಣಾಮ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್‌ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು. ಜೊತೆಗೆ ಸಣ್ಣ ಹೋಟೆಲ್‌ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ನೆರವು ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಂಗಳೂರು
ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ
ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲ... ಓದನ್ನು ಮುಂದುವರಿಸಿ
ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು
ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ
ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡ... ಓದನ್ನು ಮುಂದುವರಿಸಿ
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ
10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ
ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ
ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್
ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ
ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ ಗ್ಯಾಸ್ ಸಿಲ... ಓದನ್ನು ಮುಂದುವರಿಸಿ
ಬೆಂಗಳೂರು ನಗರ
ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ
ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟ... ಓದನ್ನು ಮುಂದುವರಿಸಿ
ಒಂದು ರೂಪಾಯಿಗೆ ಒಂದು ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿಗೆ ಪತ್ರ – ಡಿ.ಕೆ. ಸುರೇಶ್
ಬೆಂಗಳೂರು: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಯೋ... ಓದನ್ನು ಮುಂದುವರಿಸಿ