ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ
ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಕೆವಲ 3.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 25 ರನ್ ಗಳಿಸಿದ ಕೆಕೆಆರ್ ಸಂಕಷ್ಟಕ್ಕೆ ಸಿಲುಕಿತು. ನಾಯಕ ಅಜಿಂಕ್ಯ ರಹಾನೆ ಮತ್ತು ಅಂಗ್‌ಕ್ರಿಶ್ ರಘುವಂಶಿ ಕ್ರೀಸ್‌ನಲ್ಲಿ ಇದ್ದರು. ಪಂಜಾಬ್ ತಂಡದ ಬೌಲರ್ ಕ್ಸೇವಿಯರ್ ಬಾರ್ಟ್ಲೆಟ್ ದಾಳಿಯಲ್ಲಿ, ಫಿನ್ ಅಲೆನ್ ಮತ್ತು ಕ್ಯಾಮರೂನ್ ಗ್ರೀನ್ ವಿಕೆಟ್ ಕಳೆದುಕೊಂಡರು.
ಇನ್ನೊಂದೆಡೆ, ಪ್ರಮುಖ ಸ್ಪಿನ್ನರ್‌ಗಳಾದ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಇಲ್ಲದೆ ಕೆಕೆಆರ್ ಕಣಕ್ಕಿಳಿದಿದ್ದು, ತಂಡದ ಮೇಲೆ ಒತ್ತಡ ಹೆಚ್ಚಾಗಿದೆ. ಈ ಸೀಸನ್‌ನಲ್ಲಿ ಇನ್ನೂ ಗೆಲುವು ಸಾಧಿಸದಿರುವ ಕೆಕೆಆರ್ ತಂಡ ಸಂಕಷ್ಟದಲ್ಲಿದೆ. ಇದಕ್ಕೆ ವಿರುದ್ಧವಾಗಿ, ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಈ ಪಂದ್ಯ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶ ಇತ್ತು. ಆದರೆ ಮಳೆಯ ಅಡಚಣೆಯಿಂದ ಪಂದ್ಯ ಸ್ಥಗಿತಗೊಂಡಿದ್ದು, ಮುಂದಿನ ನಿರ್ಧಾರಕ್ಕಾಗಿ ಕಾದು ನೋಡಬೇಕಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್
ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ
ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ
“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!
ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ
ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!
ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ
ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ
ಕೇರಳ-ಪುದುಚೇರಿ ಚುನಾವಣಾ ಪ್ರಚಾರದಲ್ಲಿ ಡಿಕೆಶಿ ಕಿಡಿ: ನಿರುದ್ಯೋಗ, ಬೆಲೆ ಏರಿಕೆ ವಿರುದ್ಧ ವಾಗ್ದಾಳಿ!
ಕೇರಳ ಹಾಗೂ ಪುದುಚೇರಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ... ಓದನ್ನು ಮುಂದುವರಿಸಿ
ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸ್ಮಶಾನ ಸೇರಿದ ಅಜ್ಜಿ
ಉತ್ತರ ಪ್ರದೇಶದ ಫಾರೂಕಾಬಾದ್‌ನಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಕಾರು ರಿವರ್ಸ್ ವೇ... ಓದನ್ನು ಮುಂದುವರಿಸಿ
ಟ್ರಂಪ್ ಹೆಸರು ಉಲ್ಲೇಖಿಸಿ ಮೋದಿ ಸರ್ಕಾರದ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ!
ಅಸ್ಸಾಂ ಚುನಾವಣಾ ರಂಗದಲ್ಲಿ ರಾಜಕೀಯ ವಾಗ್ವಾದ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷರ ಹೆಸರ... ಓದನ್ನು ಮುಂದುವರಿಸಿ
ಬಿಜೆಪಿ ಕಚೇರಿ ಬಳಿ ಸ್ಫೋಟ ಪ್ರಕರಣ: ಐವರು ಅರೆಸ್ಟ್ – ಐಎಸ್‌ಐ ಸಂಪರ್ಕ ಶಂಕೆ!
ಚಂಡೀಗಢದಲ್ಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂ... ಓದನ್ನು ಮುಂದುವರಿಸಿ
ಪ್ರೇಮ ವಿವಾಹದ ಬಳಿಕ ಯುವತಿಯ ಹತ್ಯೆ – ಪೋಸ್ಟ್‌ಮಾರ್ಟಂನಲ್ಲಿ ಬಯಲು, ಸಿಐ ಅಮಾನತು!
ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ನಡೆದ ಗಂಭೀರ... ಓದನ್ನು ಮುಂದುವರಿಸಿ