ಮಂಡ್ಯದಲ್ಲಿ 150 ಕೋಟಿ ನೀರಾವರಿ ಯೋಜನೆ: ರೈತರಿಗೆ ಗುಡ್ ನ್ಯೂಸ್

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ರೈತರ ಬಹುಕಾಲದ ನೀರಾವರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೃಷಿ ಉದ್ದೇಶಕ್ಕಾಗಿ ನೀರಾವರಿ ಕಚೇರಿಗಳ ಮುಂದೆ ನಡೆಯುತ್ತಿದ್ದ ಪ್ರತಿಭಟನೆಗಳು ಇನ್ನು ಮುಂದೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದ್ದಾರೆ. ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 50 ಕೋಟಿ ರೂ ವೆಚ್ಚದಲ್ಲಿ ವೈದ್ಯನಾಥ, ಬೈರನ್ ಹಾಗೂ ಚಾಮನಹಳ್ಳಿ ನಾಲೆಗಳ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

 

ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ರೈತರು ನೀರಿಗಾಗಿ ಪ್ರತಿಭಟನೆ ನಡೆಸುತ್ತಿರುವುದು ಪ್ರಮುಖ ಸಮಸ್ಯೆಯಾಗಿದ್ದು, ಹಿಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಾಲೆಗಳ ಅಭಿವೃದ್ಧಿ ಆಗದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

 

ಮದ್ದೂರು ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬರುವ ಕೆಮ್ಮಣ್ಣು ನಾಲಾ ಸೇರಿದಂತೆ ಪ್ರಮುಖ ನಾಲೆಗಳ ಆಧುನೀಕರಣಕ್ಕೆ ಸರ್ಕಾರದಿಂದ ಈಗಾಗಲೇ 150 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಕೆಮ್ಮಣ್ಣು ನಾಲಾ ಕಾಮಗಾರಿ ಸುಮಾರು 100 ಕೋಟಿ ವೆಚ್ಚದಲ್ಲಿ ನಡೆಯುತ್ತಿದ್ದು, ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮುಂಗಾರು ಬೆಳೆ ವೇಳೆಗೆ ರೈತರಿಗೆ ನೀರು ಒದಗಿಸುವ ಗುರಿ ಹೊಂದಲಾಗಿದೆ.

 

ಇನ್ನೂ ಮದ್ದೂರು ನಗರದ ಮೂಲಕ ಹಾದು ಹೋಗುವ ವೈದ್ಯನಾಥ ಮತ್ತು ಬೈರನ್ ನಾಲೆಗಳನ್ನು ಸ್ವಚ್ಚ ಹಾಗೂ ಸೌಂದರ್ಯಕರವಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯಿಂದ ಸುಮಾರು 6 ಕಿ.ಮೀ ವ್ಯಾಪ್ತಿಯ 800 ಎಕರೆಗೂ ಹೆಚ್ಚು ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ.

 

ನಗರ ಪ್ರದೇಶದಲ್ಲಿ 2 ಕಿ.ಮೀ ಕಾಂಕ್ರೀಟ್ ರಸ್ತೆ ಹಾಗೂ ಕವರ್ ಡೆಕ್ ನಿರ್ಮಾಣ ಕೂಡ ಕೈಗೊಳ್ಳಲಾಗುತ್ತಿದ್ದು, ಮುಂದಿನ 15 ತಿಂಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಇದರಿಂದ ಮುಂದಿನ ಹಲವು ದಶಕಗಳ ಕಾಲ ರೈತರಿಗೆ ನಿರಂತರ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಇದಲ್ಲದೆ, ನೀರಾವರಿ ಸುಗಮಗೊಳಿಸುವ ನಿಟ್ಟಿನಲ್ಲಿ ಒತ್ತುವರಿಯಾಗಿದ್ದ ಸುಮಾರು 150 ಎಕರೆ ಮದ್ದೂರು ಕೆರೆ ಪ್ರದೇಶವನ್ನು ತೆರವುಗೊಳಿಸಿ ಹೂಳು ತೆಗೆಯುವ ಕಾರ್ಯವೂ ನಡೆಯುತ್ತಿದೆ. ಇದರಿಂದ ನೀರು ವೇಗವಾಗಿ ರೈತರ ಜಮೀನುಗಳಿಗೆ ಹರಿಯುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಈಗಾಗಲೇ 800 ಕೋಟಿಗೂ ಅಧಿಕ ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಚಿಕ್ಕಬಳ್ಳಾಪುರ

ಗ್ಯಾಸ್ ಕೊರತೆ ಹೊಡೆತ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗಳು ಬಂದ್, ರೈತರಿಗೆ ಸಂಕಷ್ಟ-ತರಕಾರಿ ಬೆಲೆ ಭಾರೀ ಕುಸಿತ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಗ್ಯಾಸ್ ಸಿಲಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!

ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!

ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೀದರ್

ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ

ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು

ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

₹1.5 ಕೋಟಿ ತೆರಿಗೆ ಬಾಕಿ: ಹೈದರಾಬಾದ್ ನಲ್ಲಿರುವ ಜಯಲಲಿತಾ ಮನೆ ಸೀಲ್

ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಬೆಂಬಲ ಬೆಲೆ ಯೋಜನೆ ಕುರಿತು ಕೇಂದ್ರದ ಜೊತೆ ರಾಜ್ಯದ ಚರ್ಚೆ

ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಧಾರವಾಡ

ಹುಬ್ಬಳ್ಳಿ

ಗಲ್ಫ್ ಯುದ್ಧದ ಪರಿಣಾಮ, ರೈತರಿಗೆ ರಸಗೊಬ್ಬರ ಕೊರತೆ ಭೀತಿ

ಹುಬ್ಬಳ್ಳಿ: ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧದ ಪ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಕೊಪ್ಪಳ

ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಸರ್ಕಾರ ತೀವ್ರ ಕ್ರಮ -ರೈತರಿಗೆ ನಿರಾಳತೆ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತು... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅಕ್ರಮ ಪಂಪ್‌ಸೆಟ್ ಸಂಪರ್ಕ ಸಕ್ರಮಕ್ಕೆ 3 ತಿಂಗಳ ಗಡುವು: ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

ಬೆಂಗಳೂರು: ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1