ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 15 ವರ್ಷದ ಬಾಲಕಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಆತಂಕ ಸೃಷ್ಟಿಸಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿಯಾಗಿರುವ ಶ್ರೀನಂದ, ಶಾಲಾ ರಜೆಯ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದಳು. ಉತ್ತರ ಕರ್ನಾಟಕ ಪ್ರವಾಸ ಮುಗಿಸಿ ಕಾಫಿನಾಡಿಗೆ ಬಂದಿದ್ದ ವೇಳೆ ಮಾಣಿಕ್ಯಾಧಾರ ಜಲಪಾತದ ಬಳಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಕುಟುಂಬಸ್ಥರು ಮುಂದೆ ಸಾಗುತ್ತಿದ್ದರೆ, ಹಿಂಬದಿಯಲ್ಲಿ ಬರುತ್ತಿದ್ದ ಶ್ರೀನಂದ ಅಚಾನಕವಾಗಿ ಕಾಣೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ತಕ್ಷಣ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

 

ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಧ್ಯರಾತ್ರಿ 1 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದರೂ ಫಲಕಾರಿಯಾಗಲಿಲ್ಲ. ಪ್ರದೇಶ ದಟ್ಟ ಕಾಡು, ಇಳಿಜಾರು ಮತ್ತು ಕಗ್ಗತ್ತಲು ಇರುವುದರಿಂದ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಮರುದಿನ ಬೆಳಿಗ್ಗೆ ಮತ್ತೆ ಆರಂಭಿಸಲಾಗಿದೆ. ಈಗ ಎಸ್‌ಡಿಆರ್‌ಎಫ್ ತಂಡವೂ ಕಾರ್ಯಾಚರಣೆಗೆ ಸೇರ್ಪಡೆಯಾಗಿದ್ದು, ಬೆಳಿಗ್ಗೆ 5 ಗಂಟೆಯಿಂದಲೇ ಥರ್ಮಲ್ ಡ್ರೋನ್ ಸಹಾಯದಿಂದ ಶೋಧ ಕಾರ್ಯ ಮುಂದುವರಿದಿದೆ.

 

ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ ಐದು ತಂಡಗಳಾಗಿ ವಿಭಜನೆಗೊಂಡು ವಿವಿಧ ಮಾರ್ಗಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ನಾಪತ್ತೆಯಾದ ಪ್ರದೇಶ ಕಡಿದಾದ ಭಾಗವಾಗಿದ್ದು, ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಪ್ರಕರಣ ನಿಗೂಢತೆಯನ್ನು ಇನ್ನಷ್ಟು ಹೆಚ್ಚಿಸಿದ್ದು, ಬಾಲಕಿ ಪತ್ತೆಗೆ ಅಧಿಕಾರಿಗಳು ನಿರಂತರ ಶ್ರಮ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಮೈಸೂರು

ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್

ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ

ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಶಿವಮೊಗ್ಗ

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಮಂಡ್ಯ

ಮದ್ದೂರು

6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ

ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಹಾಸನ

20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ

ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಮಗಳೂರು

ಮೂಡಿಗೆರೆ

ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ

ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು

ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ವಿಜಯಪುರ

ತಿಕೋಟಾ

ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ

ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1