ಮಣಿಪುರದಲ್ಲಿ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ
ಇಂಪಾಲ: ಮಣಿಪುರದಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ದಾಳಿಯಲ್ಲಿ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಘಟನೆ ರಾಜ್ಯದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಸಿದೆ. ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆ ಮೇಲೆಯೇ ಬಾಂಬ್ ದಾಳಿ ನಡೆದಿದ್ದು, ದಾಳಿಗೆ ಕುಕಿ ಉಗ್ರಗಾಮಿಗಳ ಕೈವಾಡ ಇರಬಹುದೆಂದು ಶಂಕಿಸಲಾಗಿದೆ. ಈ ಪ್ರದೇಶವು ಚುರಚಂದ್ಪುರ ಬೆಟ್ಟ ಪ್ರದೇಶಗಳ ಸಮೀಪದಲ್ಲಿದ್ದು, ಕಳೆದ ಎರಡು ವರ್ಷಗಳಲ್ಲಿ ಹಲವಾರು ಬಾರಿ ಹಿಂಸಾಚಾರ ಮತ್ತು ಗುಂಡಿನ ಚಕಮಕಿಗಳು ನಡೆದ ಹಿನ್ನೆಲೆ, ಈ ದಾಳಿ ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.
ಘಟನೆಯನ್ನು ಸ್ಥಳೀಯ ಶಾಸಕಿ ಥೋಂಗಮ್ ತೀವ್ರವಾಗಿ ಖಂಡಿಸಿದ್ದು, ಜನರು ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ, ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಬಿಷ್ಣುಪುರ ಜಿಲ್ಲೆಯಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತವಾಗಿರಲು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮುನ್ನೆಚ್ಚರಿಕೆಯಾಗಿ, ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸಿಎಂ ಸ್ಥಾನ ತ್ಯಾಗದ ಸುಳಿವು? ನಿತೀಶ್ ಕುಮಾರ್ ಮುಂದಿನ ಹೆಜ್ಜೆ ಕುತೂಹಲ
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವಂ... ಓದನ್ನು ಮುಂದುವರಿಸಿ
ಉದ್ದಿಮೆಗಳಿಗೆ ಕೇಂದ್ರದ ಬೃಹತ್ ನೆರವು – 2.5 ಲಕ್ಷ ಕೋಟಿ ಕ್ರೆಡಿಟ್ ಗ್ಯಾರಂಟಿ ಯೋಜನೆ ಸಿದ್ಧ
ದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮದಿಂದ ಭಾರತದ ಹಲವು ಕ್... ಓದನ್ನು ಮುಂದುವರಿಸಿ
‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್
ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ
ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ
ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ
ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ
“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!
ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ
ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!
ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ
ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ
ಕೇರಳ-ಪುದುಚೇರಿ ಚುನಾವಣಾ ಪ್ರಚಾರದಲ್ಲಿ ಡಿಕೆಶಿ ಕಿಡಿ: ನಿರುದ್ಯೋಗ, ಬೆಲೆ ಏರಿಕೆ ವಿರುದ್ಧ ವಾಗ್ದಾಳಿ!
ಕೇರಳ ಹಾಗೂ ಪುದುಚೇರಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ... ಓದನ್ನು ಮುಂದುವರಿಸಿ
ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸ್ಮಶಾನ ಸೇರಿದ ಅಜ್ಜಿ
ಉತ್ತರ ಪ್ರದೇಶದ ಫಾರೂಕಾಬಾದ್‌ನಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಕಾರು ರಿವರ್ಸ್ ವೇ... ಓದನ್ನು ಮುಂದುವರಿಸಿ