ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು

ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ದಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಸಲ್ಲಿಸಿದ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ.

 

2022ರ ಆಗಸ್ಟ್‌ನಲ್ಲಿ ಉದ್ಘಾಟನೆಯಾದ ಈ ಅತಿಥಿ ಗೃಹವು ಕೇವಲ ಮೂರು ವರ್ಷಗಳಲ್ಲಿ ಪಾಳುಬಿದ್ದಂತಾಗಿದ್ದು, ಹಲವಾರು ಗಂಭೀರ ಲೋಪಗಳು ಪತ್ತೆಯಾಗಿವೆ. 50 ಶೌಚಾಲಯಗಳಿಗೆ ಕೇವಲ ಇಬ್ಬರು ಸಿಬ್ಬಂದಿ ಇದ್ದು, ಫ್ಲಷ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದೆ ದುರ್ವಾಸನೆ ವ್ಯಾಪಿಸಿದೆ. ನೀರಿನ ವ್ಯವಸ್ಥೆಯಲ್ಲಿಯೂ ತೊಂದರೆಗಳು ಕಂಡುಬಂದಿವೆ. 8 ಸಿಂಟೆಕ್ಸ್ ಟ್ಯಾಂಕ್‌ಗಳಲ್ಲಿ 5 ಹಾನಿಗೊಂಡಿದ್ದು, ಡ್ರೈನೇಜ್ ಪೈಪ್‌ಗಳು ಒಡೆದು ಯಾತ್ರಾರ್ಥಿಗಳು ಅಸೌಕರ್ಯ ಅನುಭವಿಸುತ್ತಿದ್ದಾರೆ. ಗೀಸರ್ ವೈಯರಿಂಗ್ ದೋಷದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ನೀರಿನಲ್ಲಿ ವಿದ್ಯುತ್ ಪ್ರವಹಿಸುವ ಅಪಾಯವೂ ಇರುವುದಾಗಿ ವರದಿ ತಿಳಿಸಿದೆ.

 

ಇನ್ನೂ, ಒಂದು ಬಕೆಟ್ ಬಿಸಿನೀರಿಗೆ ₹30 ವಸೂಲಿ ಮಾಡಲಾಗುತ್ತಿದ್ದು, ಹಾಸಿಗೆಗಳಲ್ಲಿ ತಿಗಣೆ ಮತ್ತು ಸೊಳ್ಳೆಗಳ ಕಾಟ ಹೆಚ್ಚಾಗಿದೆ. 10 ಎಸಿ ಕೊಠಡಿಗಳಲ್ಲಿ 6 ಎಸಿಗಳು ಕಾರ್ಯನಿರ್ವಹಿಸದಿದ್ದರೂ ಯಾತ್ರಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈ ಹಿನ್ನೆಲೆ ಅತಿಥಿ ಗೃಹದ ವ್ಯವಸ್ಥಾಪಕ ಆಂಜನೇಯಲು ಹಾಗೂ ಸಹಾಯಕ ನರಸನಗೌಡ ವಿರುದ್ಧ ಪ್ರಕರಣ ದಾಖಲಿಸಲು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಆದೇಶಿಸಿದ್ದಾರೆ. ಈ ಆದೇಶದ ಪ್ರತಿಯನ್ನು ಮುಜರಾಯಿ ಇಲಾಖೆಗೆ ಕಳುಹಿಸಲು ಸೂಚಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

20 hours ago

   
Image 1
Image 1
ದಾವಣಗೆರೆ

ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ

ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಹಾವೇರಿ

ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು

ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು

ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ

ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ

ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬಾಗಲಕೋಟೆ

ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ

ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1