“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!
ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್ಪಷ್ಟವಾಗಿ ಘೋಷಿಸಿದ ಘಟನೆ ಈಗ ಚರ್ಚೆಗೆ ಕಾರಣವಾಗಿದೆ. ಗಂಡನೊಂದಿಗೆ ಬದುಕಲು ಇಚ್ಛಿಸದ ಯುವತಿ, ನ್ಯಾಯಾಲಯದ ಮುಂದೆ ತನ್ನ ನಿರ್ಧಾರವನ್ನು ದೃಢವಾಗಿ ಹೇಳಿಕೊಂಡಿದ್ದಾಳೆ. “ನಾನು ವಯಸ್ಕಳು… ನನ್ನ ಜೀವನವನ್ನು ನನ್ನ ಇಚ್ಛೆಯಂತೆ ನಡೆಸುತ್ತೇನೆ. ಗಂಡನ ಜೊತೆಯಲ್ಲಾಗಲಿ, ಪೋಷಕರ ಜೊತೆಯಲ್ಲಾಗಲಿ ಬದುಕಲು ನಾನು ಬಯಸುವುದಿಲ್ಲ” ಎಂದು ಯುವತಿ ನ್ಯಾಯಾಲಯಕ್ಕೆ ತಿಳಿಸಿದ್ದಾಳೆ. ಈ ಪ್ರಕರಣವನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠದ ನ್ಯಾಯಮೂರ್ತಿಗಳು ವಿಚಾರಣೆ ನಡೆಸಿದರು. ಗಂಡ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ, ತನ್ನ ಪತ್ನಿಯನ್ನು ಕಾನೂನುಬಾಹಿರವಾಗಿ ವಶದಲ್ಲಿಟ್ಟಿದ್ದಾರೆ ಎಂದು ಆರೋಪಿಸಿದ್ದನು.
ಆದರೆ ವಿಚಾರಣೆ ವೇಳೆ ಯುವತಿ ನ್ಯಾಯಾಲಯದಲ್ಲಿ ಹಾಜರಾಗಿ, ತನ್ನ ಪ್ರಿಯಕರನ ಜೊತೆ ಹೋಗಲು ಬಯಸುವುದಾಗಿ ಸ್ಪಷ್ಟಪಡಿಸಿದ್ದಾಳೆ. ಗಂಡನ ಮೇಲಿನ ಆರೋಪಗಳನ್ನು ಕೂಡ ತಳ್ಳಿಹಾಕಿದ್ದಾಳೆ. ಯುವತಿ ತನ್ನ ಮೇಲೆ ಗಂಡ ಹಾಗೂ ಪೋಷಕರಿಂದ ಕಿರುಕುಳ ಮತ್ತು ಹಿಂಸೆ ನಡೆದಿರುವುದನ್ನು ವಿವರಿಸಿದ್ದು, ಪ್ರಿಯಕರನ ಜೊತೆಗಿದ್ದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಅನುಭವಿಸುತ್ತಿದ್ದೇನೆ ಎಂದು ಹೇಳಿದ್ದಾಳೆ.ಇನ್ನೊಂದೆಡೆ, ಪ್ರಿಯಕರ ಕೂಡ ನ್ಯಾಯಾಲಯದಲ್ಲಿ ತನ್ನ ಪ್ರೀತಿಯ ದೃಢತೆಯನ್ನು ವ್ಯಕ್ತಪಡಿಸಿ, ಯಾವುದೇ ರೀತಿಯ ಕಿರುಕುಳ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾನೆ. ಎಲ್ಲ ವಿಚಾರಗಳನ್ನು ಪರಿಗಣಿಸಿದ ನ್ಯಾಯಾಲಯ, ಯುವತಿ ವಯಸ್ಕಳಾಗಿರುವ ಹಿನ್ನೆಲೆಯಲ್ಲಿ, ತನ್ನ ಸ್ವಂತ ಇಚ್ಛೆಯಂತೆ ಬದುಕುವ ಹಕ್ಕು ಹೊಂದಿದ್ದಾಳೆ ಎಂದು ಸ್ಪಷ್ಟಪಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್
ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ
ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ
ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ
ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ
ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!
ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ
ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ
ಕೇರಳ-ಪುದುಚೇರಿ ಚುನಾವಣಾ ಪ್ರಚಾರದಲ್ಲಿ ಡಿಕೆಶಿ ಕಿಡಿ: ನಿರುದ್ಯೋಗ, ಬೆಲೆ ಏರಿಕೆ ವಿರುದ್ಧ ವಾಗ್ದಾಳಿ!
ಕೇರಳ ಹಾಗೂ ಪುದುಚೇರಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ... ಓದನ್ನು ಮುಂದುವರಿಸಿ
ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸ್ಮಶಾನ ಸೇರಿದ ಅಜ್ಜಿ
ಉತ್ತರ ಪ್ರದೇಶದ ಫಾರೂಕಾಬಾದ್‌ನಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಕಾರು ರಿವರ್ಸ್ ವೇ... ಓದನ್ನು ಮುಂದುವರಿಸಿ
ಟ್ರಂಪ್ ಹೆಸರು ಉಲ್ಲೇಖಿಸಿ ಮೋದಿ ಸರ್ಕಾರದ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ!
ಅಸ್ಸಾಂ ಚುನಾವಣಾ ರಂಗದಲ್ಲಿ ರಾಜಕೀಯ ವಾಗ್ವಾದ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷರ ಹೆಸರ... ಓದನ್ನು ಮುಂದುವರಿಸಿ
ಬಿಜೆಪಿ ಕಚೇರಿ ಬಳಿ ಸ್ಫೋಟ ಪ್ರಕರಣ: ಐವರು ಅರೆಸ್ಟ್ – ಐಎಸ್‌ಐ ಸಂಪರ್ಕ ಶಂಕೆ!
ಚಂಡೀಗಢದಲ್ಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂ... ಓದನ್ನು ಮುಂದುವರಿಸಿ
ಪ್ರೇಮ ವಿವಾಹದ ಬಳಿಕ ಯುವತಿಯ ಹತ್ಯೆ – ಪೋಸ್ಟ್‌ಮಾರ್ಟಂನಲ್ಲಿ ಬಯಲು, ಸಿಐ ಅಮಾನತು!
ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ನಡೆದ ಗಂಭೀರ... ಓದನ್ನು ಮುಂದುವರಿಸಿ