ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ
ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗದ ರೈತರಿಗೆ ನೀರು ಹರಿಸಲಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆ ರೈತರು ಮದ್ದೂರು ತಾಲೂಕಿನ ಬೆಸಗರಹಳ್ಳಿ ಅಡ್ಡರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗಗಳಾದ ಬೆಸಗರಹಳ್ಳಿ, ಹೊಸಕೆರೆ, ಆನೆದೊಡ್ಡಿ, ಕೊತ್ತನಹಳ್ಳಿ, ಸೊಳ್ಳೆಪುರ ಸೇರಿದಂತೆ ಹಲವು ಗ್ರಾಮಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ರಸ್ತೆ ತಡೆ ನಡೆಸಿದರು. ಇದರ ಪರಿಣಾಮವಾಗಿ ಮದ್ದೂರು–ಕೊಪ್ಪ ರಸ್ತೆ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತ ಸಂಘದ ಕಾರ್ಯಕರ್ತರು ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಎಚ್.ಜಿ. ಪ್ರಭುಲಿಂಗು ಮಾತನಾಡಿ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಾಲೆಯ ಕೊನೆ ಭಾಗಗಳಿಗೆ ನೀರು ತಲುಪದೇ ಬೆಳೆಗಳು ಒಣಗುತ್ತಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ಇದೇ ವೇಳೆ, “ಕೆಆರ್‌ಎಸ್‌ನಲ್ಲಿ 66 ಅಡಿ ನೀರಿದ್ದಾಗಲೂ ಕೊನೆ ಭಾಗಕ್ಕೆ ನೀರು ಬರುತ್ತಿತ್ತು. ಆದರೆ ಈಗ 104 ಅಡಿ ನೀರಿದ್ದರೂ ಏಕೆ ನೀರು ಬಿಡುತ್ತಿಲ್ಲ?” ಎಂದು ಪ್ರಶ್ನಿಸಿದರು. ಮುಂದಿನ 8 ದಿನಗಳಲ್ಲಿ ನೀರು ಹರಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿ, ಅಧಿಕಾರಿಗಳ ಭರವಸೆ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಸ್ಥಳಕ್ಕೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಎಇಇ ಅಜಯ್, ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲಾಗಿದೆ. ಒಟ್ಟಿನಲ್ಲಿ, ನೀರಿನ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ರೈತರು ತಕ್ಷಣ ಪರಿಹಾರ ನೀಡುವಂತೆ ಸರ್ಕಾರ ಮತ್ತು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ
ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ
ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ
ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ
ಮಂಗಳೂರು
ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು
ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ
RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ
ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ
ನರಗುಂದ
ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗ... ಓದನ್ನು ಮುಂದುವರಿಸಿ