‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ

ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ರದ್ದುಪಡಿಸಲು ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಮತ್ತು ಆಶಿಯಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, “ಈ ರೀತಿಯ ಟ್ರಸ್ಟ್ ಸ್ಥಾಪಿಸಲು ನಿಮಗೆ ಅಧಿಕಾರ ನೀಡಿದವರು ಯಾರು? ಈ ಸಂಸ್ಥೆಗೆ ತಡೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ನ್ಯಾಯಾಲಯ ಕಠಿಣವಾಗಿ ಅಭಿಪ್ರಾಯಪಟ್ಟಿತು. ಈ ಹಿನ್ನೆಲೆ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಲಾಗಿದೆ.

 

ಪ್ರಕರಣದ ಹಿನ್ನೆಲೆ
ರೌಡಿಶೀಟರ್‌ಗಳು ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಆರಂಭಿಸಿ, ಸಾರ್ವಜನಿಕರನ್ನು ತಪ್ಪು ದಾರಿಗೆಳೆದು ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದರೆಂದು ಆರೋಪಿಸಲಾಗಿದೆ. ಯುವಕರನ್ನು ಸೇರಿಸಿ, “ನಾವು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಸುಳ್ಳು ಮಾಹಿತಿ ನೀಡುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ, ಸದಸ್ಯರು ತಮ್ಮನ್ನು ಸಾರ್ವಜನಿಕ ನೌಕರರಂತೆ ವರ್ತಿಸಿಕೊಂಡು, ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 204, 353(1)(b) ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ತನಿಖೆ ಮುಂದುವರಿಯಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ದಾವಣಗೆರೆ

ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ

ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಹಾವೇರಿ

ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು

ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು

ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ

ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬಾಗಲಕೋಟೆ

ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ

ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ರಾಯಚೂರು

ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು

ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1