ಪ್ರಧಾನಿ ಮೋದಿ ಅಭಿನಂದನೆ: ಚಾಂಪಿಯನ್ಸ್! ಭಾರತ T20 ವಿಶ್ವಕಪ್ ಜಯ

ಅಹಮದಾಬಾದ್: ICC ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದೆ. ಭಾರತ–ನ್ಯೂಜಿಲೆಂಡ್ ನಡುವಿನ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಯಿತು.

 

ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದಲ್ಲಿ ಸಂಜು ಸ್ಯಾಮ್‌ಸನ್ 89 ರನ್, ಅಭಿಷೇಕ್ ಶರ್ಮಾ 52 ರನ್, ಹಾಗೂ ಇಷಾನ್ ಕಿಶನ್ 54 ರನ್ ಗಳಿಸಿ ಅರ್ಧಶತಕ ಸಿಡಿಸಿದರು. ಈ ಉತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು.

 

256 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 19 ಓವರ್‌ಗಳಲ್ಲಿ 159 ರನ್‌ಗೆ ಆಲೌಟ್ ಆಯಿತು. ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದು ಭಾರತ ತಂಡಕ್ಕೆ ಮಾರಕ ಸಾಧನೆ ನೀಡಿದ್ದಾರೆ. ಭಾರತ ತಂಡ 96 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು, ಚಾಂಪಿಯನ್ ಪಟ್ಟವನ್ನು ಗೆದ್ದಿದೆ.

 

ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. “ಚಾಂಪಿಯನ್ಸ್! ICC ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಸಾಮೂಹಿಕ ಪ್ರಯತ್ನದ ಪ್ರತಿಫಲವಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಸಂತಸ ಮತ್ತು ಹೆಮ್ಮೆ ತಂದಿದೆ,” ಎಂದು ಪ್ರಧಾನಿ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1

ಮಾರ್ಚ್ 28ರಿಂದ ಐಪಿಎಲ್ 19: RCB–SRH ಉದ್ಘಾಟನಾ ಪಂದ್ಯ, ಮೊದಲ ಹಂತದ 20 ಪಂದ್ಯಗಳ ವಿವರಗಳು ಪ್ರಕಟ!

 ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಮೊದಲ ಹಂತದ 20 ಪಂದ್ಯಗಳ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ — 8 ಪ್ರಮುಖ ಆಟಗಾರರು ಹೊರಗುಳಿದರು!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಜಿಲೆಂಡ್ ತಂಡ ಸೌತ್ ಆಫ್ರಿಕಾ ವಿರುದ್ಧ ಐದು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಹೊಸ ಗರ್ಲ್‌ಫ್ರೆಂಡ್ ಮುಂಬರುವಂತೆಯೇ ಹಾರ್ದಿಕ್-ಕೃನಾಲ್ ನಡುವೆ ದೂರ!

ಭಾರತದ ಸ್ಟಾರ್ ಕ್ರಿಕೆಟ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಭಾರತ ಟೀಂಗೆ 131 ಕೋಟಿ ನಗದು ಬಹುಮಾನ: 2026 ಟಿ20 ವಿಶ್ವಕಪ್ ಗೆಲುವಿನ ಸಂತೋಷ

ಮುಂಬೈ: 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಭಾರತಕ್ಕೆ 131 ಕೋಟಿ ನಗದು ಬಹುಮಾನ: 2026 ಟಿ20 ವಿಶ್ವಕಪ್ ಗೆಲುವಿಗೆ ಬಿಸಿಸಿಐ ಘೋಷಣೆ

ಮುಂಬೈ: Board of Control for Cricket in India (BCCI) 202... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

2028 ಟಿ20 ವಿಶ್ವಕಪ್: 12 ತಂಡಗಳಿಗೆ ನೇರ ಅರ್ಹತೆ, ಭಾರತ–ನ್ಯೂಜಿಲೆಂಡ್ ಖಚಿತ

2028 ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಲ್ಲಿ ನಡೆಯಲಿದೆ. ಈಗಾಗಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಟೀಂ ಇಂಡಿಯಾ 2026 ಟಿ20 ವಿಶ್ವಕಪ್ ಗೆಲುವು: ಗೌತಮ್ ಗಂಭೀರ್ ಕೋಚ್ ಆಗಿ ಐತಿಹಾಸಿಕ ಸಾಧನೆ

ಅಹಮದಾಬಾದ್: ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಟಿ20 ವಿಶ್ವಕಪ್ ಜಯ – ಕ್ರಿಕೆಟ್ ಪ್ರೇಮಿಗಳಲ್ಲಿ ಅಪಾರ ಸಂಭ್ರಮ

ಚಿತ್ರದುರ್ಗ: ಟಿಟ್ವೆಂಟಿ ವರ್ಲ್ಡ್ ಕಪ್ ಫೈನಲ್‌ನಲ್ಲಿ ಭಾರತ ತಂಡವ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಮೂರನೇ T20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ: ಶುಭ ಕೋರಿದ ಪರಿಷತ್ ಶಾಸಕ TA ಶರವಣ!

ಬೆಂಗಳೂರು: Narendra Modi Stadiumನಲ್ಲಿ ಭಾನುವಾರ 2026ರ ಟಿ20... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದು ಇತಿಹಾಸ ರಚಿಸಿದ ಟೀಮ್ ಇಂಡಿಯಾ

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ Narendra Modi Stadiumನಲ್ಲಿ ನಡೆದ ಟಿ20 ವಿಶ್ವಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1