ಪ್ರೇಮ ವಿವಾಹದ ಬಳಿಕ ಯುವತಿಯ ಹತ್ಯೆ – ಪೋಸ್ಟ್‌ಮಾರ್ಟಂನಲ್ಲಿ ಬಯಲು, ಸಿಐ ಅಮಾನತು!
ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ನಡೆದ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಿದ್ದ ಚೌಡೇಶ್ವರಿ (22) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇದೀಗ ಇದು ಕೊಲೆ ಎಂದು ದೃಢಪಟ್ಟಿದೆ. ಮಾ.4 ರಂದು ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದ ಈ ಯುವತಿ, ಕುಟುಂಬದ ವಿರೋಧವನ್ನು ಎದುರಿಸುತ್ತಿದ್ದರು. ಈ ಸಂಬಂಧ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಸಿದ್ದರು.
ಮಾರ್ಚ್ 15ರಂದು ಮಾಚೆರ್ಲಾ ಸರ್ಕಲ್ ಇನ್ಸ್‌ಪೆಕ್ಟರ್ ದಂಪತಿಯನ್ನು ಪತ್ತೆಹಚ್ಚಿ, ಮಹಿಳೆಯನ್ನು ಪೋಷಕರ ಮನೆಗೆ ಹಿಂತಿರುಗುವಂತೆ ಒತ್ತಾಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಮೂರು ದಿನಗಳಲ್ಲಿ ಆಕೆ ಪೋಷಕರ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಹೇಳಲು ಪ್ರಯತ್ನ ನಡೆದಿತ್ತು.
ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಇದು ಕೊಲೆ ಎಂದು ಸ್ಪಷ್ಟವಾಗಿದ್ದು, ಮಲಗಿದ್ದ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ವೈದ್ಯರು ವರದಿಯಲ್ಲಿ ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಮಹಿಳೆಯ ತಂದೆ ಚಂದ್ರಶ್ರೀ ಹಾಗೂ ಮತ್ತೊಬ್ಬ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸ್ ಅಧಿಕಾರಿಯ ಸಹಾಯವೂ ಇರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇದಲ್ಲದೆ, ಸರ್ಕಲ್ ಇನ್ಸ್‌ಪೆಕ್ಟರ್ ಲಂಚ ಪಡೆದಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕುಟುಂಬದ ಬ್ಯಾಂಕ್ ಖಾತೆ ವ್ಯವಹಾರಗಳನ್ನೂ ತನಿಖೆಗೆ ಒಳಪಡಿಸಲಾಗಿದ್ದು, ದೊಡ್ಡ ಪ್ರಮಾಣದ ಹಣ ವಿತ್‌ಡ್ರಾ ಆಗಿರುವ ಮಾಹಿತಿ ಪರಿಶೀಲನೆಯಲ್ಲಿದೆ. ಪ್ರಕರಣದ ಹಿನ್ನೆಲೆ, ಸಂಬಂಧಿತ ಸರ್ಕಲ್ ಇನ್ಸ್‌ಪೆಕ್ಟರ್ ಅನ್ನು ಅಮಾನತು ಮಾಡಲಾಗಿದ್ದು, ಲಂಚ ಹಾಗೂ ಸಾಕ್ಷ್ಯ ನಾಶದ ಆರೋಪ ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಪ್ರೇಮ ವಿವಾಹ, ಕುಟುಂಬದ ಒತ್ತಡ ಹಾಗೂ ನಿರ್ಲಕ್ಷ್ಯದ ಭೀಕರ ಪರಿಣಾಮಗಳನ್ನು ಮತ್ತೊಮ್ಮೆ ಹೊರಹಾಕಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್
ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ
ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ
ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ
ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ
“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!
ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ
ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!
ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ
ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ
ಕೇರಳ-ಪುದುಚೇರಿ ಚುನಾವಣಾ ಪ್ರಚಾರದಲ್ಲಿ ಡಿಕೆಶಿ ಕಿಡಿ: ನಿರುದ್ಯೋಗ, ಬೆಲೆ ಏರಿಕೆ ವಿರುದ್ಧ ವಾಗ್ದಾಳಿ!
ಕೇರಳ ಹಾಗೂ ಪುದುಚೇರಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ... ಓದನ್ನು ಮುಂದುವರಿಸಿ
ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸ್ಮಶಾನ ಸೇರಿದ ಅಜ್ಜಿ
ಉತ್ತರ ಪ್ರದೇಶದ ಫಾರೂಕಾಬಾದ್‌ನಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಕಾರು ರಿವರ್ಸ್ ವೇ... ಓದನ್ನು ಮುಂದುವರಿಸಿ
ಟ್ರಂಪ್ ಹೆಸರು ಉಲ್ಲೇಖಿಸಿ ಮೋದಿ ಸರ್ಕಾರದ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ!
ಅಸ್ಸಾಂ ಚುನಾವಣಾ ರಂಗದಲ್ಲಿ ರಾಜಕೀಯ ವಾಗ್ವಾದ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷರ ಹೆಸರ... ಓದನ್ನು ಮುಂದುವರಿಸಿ
ಬಿಜೆಪಿ ಕಚೇರಿ ಬಳಿ ಸ್ಫೋಟ ಪ್ರಕರಣ: ಐವರು ಅರೆಸ್ಟ್ – ಐಎಸ್‌ಐ ಸಂಪರ್ಕ ಶಂಕೆ!
ಚಂಡೀಗಢದಲ್ಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂ... ಓದನ್ನು ಮುಂದುವರಿಸಿ