ರಾಸು ಖರೀದಿಗೆ ನೆರವು: ಬಮೂಲ್‌ ನಿರ್ದೇಶಕ ರಮೇಶ್‌

ಆನೇಕಲ್ : ಆನೇಕಲ್ ಪಟ್ಟಣದ ಬಮೂಲ್‌ ಶಿಬಿರ ಕಚೇರಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮತ್ತು ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಕ್ಷೀರ ಸಂಜೀವಿನಿ ಯೋಜನೆಯಡಿ ತಾಲ್ಲೂಕಿನ ಎರಡು ಹಾಲು ಉತ್ಪಾದಕ ಸಹಕಾರ ಮಹಿಳಾ ಸಂಘಗಳಿಗೆ ಬಮೂಲ್‌ ನಿರ್ದೇಶಕ ಆರ್‌.ಕೆ.ರಮೇಶ್‌ ರಾಸು ಖರೀದಿಸಲು ಚೆಕ್‌ ಮತ್ತು ವಿಮೆ ಸೌಲಭ್ಯವನ್ನು ಮಂಗಳವಾರ ವಿತರಿಸಿದರು.

 

ಬಳಿಕ ಮಾತನಾಡಿದ ಅವರು, ತಾಲ್ಲೂಕಿನ 13 ಗ್ರಾಮಗಳಲ್ಲಿ ಹಾಲು ಉತ್ಪಾದಕ ಸಹಕಾರ ಮಹಿಳಾ ಸಂಘಗಳಿವೆ. ಈ ಪೈಕಿ ಕಾಡುಜಕ್ಕನಹಳ್ಳಿ ಮತ್ತು ಬಂಡೆನಲ್ಲಸಂದ್ರ ಗ್ರಾಮಗಳ ಮಹಿಳಾ ಸಂಘಗಳಿಗೆ ರಾಸು ಖರೀದಿಸಲು ₹47 ಸಾವಿರದ ಚೆಕ್‌ ನೀಡಲಾಗಿದೆ. ಚೆಕ್‌ನೊಂದಿಗೆ ರಾಸು ವಿಮೆಯನ್ನು ಬಮೂಲ್‌ನಿಂದಲೇ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ 13 ಮಹಿಳಾ ಸಂಘಗಳಿಗೆ ಕ್ಷೀರ ಸಂಜೀವಿನಿ ಯೋಜನೆಯಡಿ ರಾಸು ಖರೀದಿಸಲು ಅನುದಾನ ನೀಡಲಾಗುವುದು ಎಂದು ಹೇಳಿದರು.

 

ಹಾಲು ಉತ್ಪಾದಕ ಮಹಿಳಾ ಸಂಘಗಳು 12 ತಿಂಗಳ ಬಡ್ಡಿ ರಹಿತವಾಗಿ ಈ ಸಾಲ ಸೌಲಭ್ಯ ತೀರಿಸಬಹುದಾಗಿದೆ. ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರಿಗೆ ₹2.5ಲಕ್ಷ ವೆಚ್ಚದ ವೈದ್ಯಕೀಯ ನೆರವಿಗೆ ಚೆಕ್ ವಿತರಿಸಲಾಗಿದೆ ಎಂದು ತಿಳಿಸಿದರು. ಬಮೂಲ್‌ ರೈತಸ್ನೇಹಿಯಾಗಿದ್ದು, ಹಾಲು ಉತ್ಪಾದಕ ರೈತರಿಗೆ ಅವಶ್ಯಕವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ವಿತರಣೆಗೆ ಆದ್ಯತೆ ನೀಡಲಾಗಿದೆ. ಶೀಘ್ರವೇ ಆನೇಕಲ್‌ ತಾಲ್ಲೂಕಿನ ಹಾಲು ಉತ್ಪಾದಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುವುದು ಎಂದರು.

 

ಹಾಲು ಉತ್ಪಾದನೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ರೈತರು ತಮ್ಮ ಆದಾಯ ದುಪ್ಪಟ್ಟು ಮಾಡಿಕೊಳ್ಳಲು ಹೈನುಗಾರಿಕೆ ಆರಂಭಿಸಬೇಕು. ಹಾಲು ಒಕ್ಕೂಟದಲ್ಲಿ 22 ಲಕ್ಷ ಲೀಟರ್‌ ಹಾಲು ಸಂಗ್ರಹಿಸುವ ಸಾಮರ್ಥ್ಯವಿದೆ. ಆದರೆ 15 ಲಕ್ಷ ಲೀಟರ್‌ ಮಾತ್ರ ಸಂಗ್ರಹವಾಗುತ್ತಿದೆ ಎಂದರು. ಬಮೂಲ್ ನಿರ್ದೇಶಕ ಆರ್‌.ಕೆ.ರಮೇಶ್, ಶಿಬಿರದ ಉಪವ್ಯವಸ್ಥಾಪಕ ಡಾ.ಸಿ.ಜಿ.ಸುರೇಶ್, ಮಹಿಳಾ ಒಕ್ಕೂಟದ ಅಧ್ಯಕ್ಷ, ಕಾರ್ಯದರ್ಶಿಗಳು ಇದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಚಿಕ್ಕಮಗಳೂರು

ಮಂಗನ ಕಾಯಿಲೆಗೆ ಶಿವಮೊಗ್ಗದಲ್ಲಿ ಯುವಕ ಬಲಿ.. ಚಿಕ್ಕಮಗಳೂರಲ್ಲಿ ಹೆಚ್ಚಾಯ್ತು ಕಾಯಿಲೆ..! 595 ಮಂದಿಗೆ ರಕ್ತ ಪರೀಕ್ಷೆ

ಚಿಕ್ಕಮಗಳೂರು : ಮಂಗನ ಕಾಯಿಲೆ ರಾಜ್ಯದ ಜನರಿಗೆ ಮತ್ತೆ ಆತಂಕ ತಂದೊ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಹಾವೇರಿ

ಮುಂಡಗೋಡ

ಮುಂಡಗೋಡದಲ್ಲಿ ದ್ಯಾಮವ್ವ–ಮಾರಿಕಾಂಬ ದೇವಿಯ ರಥೋತ್ಸವಕ್ಕೆ ಭಕ್ತರ ಸಾಗರ

ಮುಂಡಗೋಡ: ಮುಂಡಗೋಡ ನಗರದ ಅಧಿದೇವತೆಯಾದ ಶ್ರೀ ದ್ಯಾಮವ್ವ ದೇವಿಯ ರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ವೈಭವದ ಕೋದಂಡರಾಮ ರಥೋತ್ಸವ

ಆನೇಕಲ್ : ಸರ್ಜಾಪುರದ ಕೋದಂಡರಾಮ ರಥೋತ್ಸವ ವೈಭವದಿಂದ ಮಂಗಳವಾರ ನಡ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಶಾಲೆಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ಗಮನಕ್ಕೆ ತನ್ನಿ - ಜಿಲ್ಲಾಧಿಕಾರಿ ಜಗದೀಶ.ಜಿ

ಬೆಂಗಳೂರು : ಶಾಲೆಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದಲ್ಲಿ ಶಿಕ್ಷಕ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಟ್ಯೂಷನ್‌ ಗೆ ಹೋಗು ಎಂದಿದ್ದೇ ತಪ್ಪಾಯ್ತಾ - ಮನೆ ಬಿಟ್ಟು ಉಚಿತ ಬಸ್‌ ಹಿಡಿದ ಪುಟಾಣಿಗಳು!

ಬೆಂಗಳೂರು: 13 ಮತ್ತು 9 ವರ್ಷದ ಅಕ್ಕ ತಮ್ಮ ಜೋಡಿ ನಾಪತ್ತೆಯಾಗಿದ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಚಿತ್ರದುರ್ಗ

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ 'ಲೈಂಗಿಕ ಕಿರುಕುಳ' : ಖಾಸಗಿ ಶಾಲಾ ಶಿಕ್ಷಕನ ವಿರುದ್ಧ 'ಪೋಸ್ಕೊ' ಕೇಸ್ ದಾಖಲು!

ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೀದರ್

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ

ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಕೋಲಾರ

ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು

ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ‌: ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಂಗಳೂರು ನಗರ

ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1