ರಥೋತ್ಸವದಲ್ಲಿ ಭೀಕರ ದುರ್ಘಟನೆ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್

ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆ ರಥೋತ್ಸವ ವೇಳೆ ಭೀಕರ ದುರ್ಘಟನೆ ಸಂಭವಿಸಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಅರಳಗುಂಡಗಿ ಗ್ರಾಮವು ಶರಣಬಸವೇಶ್ವರ ಅವರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಭಾನುವಾರ (ಮಾರ್ಚ್ 8) ಸಂಜೆ ಸುಮಾರು 6 ಗಂಟೆ ವೇಳೆಗೆ ಜಾತ್ರೆಯ ಅಂಗವಾಗಿ ರಥೋತ್ಸವ ಆರಂಭವಾಗಿತ್ತು.

 

ಈ ವೇಳೆ ಗ್ರಾಮಸ್ಥರು ಭಕ್ತಿಭಾವದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಆದರೆ ಜನಸಮೂಹ ಹೆಚ್ಚಾಗಿದ್ದ ಕಾರಣ ರಥ ನಿಯಂತ್ರಣ ತಪ್ಪಿ ಜನರು ನಿಂತಿದ್ದ ದಿಕ್ಕಿಗೆ ಚಲಿಸಿದೆ.

 

ಈ ಸಂದರ್ಭ ರಥದ ಸಮೀಪದಲ್ಲಿದ್ದ ನಾಗಮ್ಮ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದು ಭೀಕರ ಗಾಯಗಳಾಗಿವೆ.

 

ಘಟನೆ ನಡೆದ ಕೂಡಲೇ ಸ್ಥಳದಲ್ಲಿದ್ದ ಜನರು ಮಹಿಳೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

39 minutes ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

42 minutes ago

   
Image 1
ಕೊಡಗು

ಮಡಿಕೇರಿ

ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

52 minutes ago

   
Image 1
ದಕ್ಷಿಣಕನ್ನಡ

ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ

ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ


Edited by: ಬಾನು

55 minutes ago

   
Image 1
ಬೀದರ್

ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಉತ್ತರಕನ್ನಡ

ಕುಮಟಾ

ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಗದಗ

ಆಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಾಗಾಟ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ

ಗದಗ: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆಂಬುಲೆನ್ಸ್ ವಾಹನವ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಕಲ್ಬುರ್ಗಿ

ಭಕ್ತರ ಭವ್ಯ ಸಮ್ಮೇಳನ: ಕಲಬುರಗಿಯಲ್ಲಿ 204ನೇ ರಥೋತ್ಸವ ಸಂಭ್ರಮ

ಕಲಬುರಗಿ: ಕಲಬುರಗಿಯಲ್ಲಿ ಇಂದು ಶರಣಬಸವೇಶ್ವರರ 204ನೇ ರಥೋತ್ಸವ ಭ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಕಲ್ಬುರ್ಗಿ

ಮೋದಿ–ಟ್ರಂಪ್ ಸ್ನೇಹದಿಂದ ಭಾರತ ಸ್ವಾಭಿಮಾನ ಹಾಳು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1