ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಹತ್ಯೆ ಮಾಡಿ, ಬಳಿಕ ಶವವನ್ನು ಸುಟ್ಟಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಹತ್ಯೆಗೆ ಒಳಗಾದವರು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

 

ಸಾಮಾನ್ಯವಾಗಿ ಬೀದರ್‌ನಲ್ಲೇ ವಾಸವಾಗಿದ್ದ ಜ್ಯೋತಿ, ವಾರಕ್ಕೊಮ್ಮೆ ಕಲಬುರಗಿಗೆ ಬಂದು ಮತ್ತೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಪ್ರಯಾಣದ ಮಧ್ಯದಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.  ಕಲಬುರಗಿಯಿಂದ ಬೀದರ್ ಕಡೆ ತೆರಳುತ್ತಿದ್ದಾಗ ಕಮಲಾಪುರದ ಕಲ್ಮೂಡ ಗ್ರಾಮದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಕೊಲೆ ನಂತರ ಸಾಕ್ಷ್ಯ ನಾಶಪಡಿಸಲು ಸುಮಾರು ಐದು ಲೀಟರ್ ಪೆಟ್ರೋಲ್ ಸುರಿದು ಶವವನ್ನು ಸುಟ್ಟಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. nಮೊದಲಿಗೆ ಅಪರಿಚಿತ ಶವವಾಗಿ ಪ್ರಕರಣ ದಾಖಲಾಗಿದ್ದರೂ, ನಂತರ ತನಿಖೆಯಲ್ಲಿ ಮೃತರು ಜ್ಯೋತಿ ಹಿರೇಮಠ ಎಂಬುದು ದೃಢಪಟ್ಟಿದೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿಕ್ಷಕಿಯ ಕ್ರೂರ ಹತ್ಯೆ ಪ್ರಕರಣ ಜಿಲ್ಲೆಯಲ್ಲೇ ಆತಂಕ ಸೃಷ್ಟಿಸಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯ ಕೇಳಿಬರುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ರಾಯಚೂರು

7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ದಲಿತ ಸ್ವಾಮೀಜಿಗೆ ದೌರ್ಜನ್ಯ ಆರೋಪ: ದೇವಸ್ಥಾನದಲ್ಲೇ ಎಳೆದಾಡಿ ಹಲ್ಲೆ!

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ದಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1