ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ
ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ‘ಕಬ್ಬಿಣದ ಕಡಲೆ’ಯಾಗಿ ಪರಿಣಮಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮುಖವಾಡ ಧರಿಸಿ ಜನರನ್ನು ತಪ್ಪುದಾರಿಗೆಳೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
“ಈ ಉಪಚುನಾವಣೆಗಳು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಯಾವುದು ಉಳಿಸಿಕೊಳ್ಳಬೇಕು ಎಂಬ ಗೊಂದಲದಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ಸಿಲುಕಿದ್ದಾರೆ,” ಎಂದು ಹೇಳಿದರು. ದಾವಣಗೆರೆಯ ಮತದಾರರ ಆಕ್ರೋಶವು ಮುಂದಿನ ರಾಜಕೀಯ ದಿಕ್ಕನ್ನು ಸೂಚಿಸುತ್ತಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ತೋರಿಸುವ ನಾಟಕ ಮಾಡುತ್ತಿದೆ ಎಂಬುದೂ ಜನರಿಗೆ ಈಗ ಸ್ಪಷ್ಟವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಜೆಟ್ ಮಂಡಿಸಿದ ಅನುಭವ ಹೊಂದಿದ್ದರೂ, ಅದನ್ನು ರಾಜ್ಯದ ಅಭಿವೃದ್ಧಿಗೆ ಬಳಸಲು ವಿಫಲರಾಗಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲದಿದ್ದರೂ, ಗ್ಯಾರಂಟಿಗಳನ್ನೇ ಅಭಿವೃದ್ಧಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ವಾತಾವರಣ ಇನ್ನಷ್ಟು ಕಾವೇರಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ
“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ
ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ
“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು
ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ
ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ
ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ
ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ
ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ
ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ
‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ
ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ