‘ವಿಬಿ-ಜಿ ರಾಮ್‌ ಜಿ’ ಹೊಸ ಕಾಯ್ದೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್

ಮಂಡ್ಯ:- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ವಿಬಿ-ಜಿ ರಾಮ್‌ ಜಿ’ ಎಂಬ ಹೊಸ ಕಾಯ್ದೆ ಗ್ರಾಮೀಣಾಭಿವೃದ್ಧಿಗೆ ಉತ್ತೇಜನ ನೀಡಲಿದ್ದು, ಪಾರದರ್ಶಕತೆ ಮತ್ತು ಉತ್ತಮ ಕಾರ್ಮಿಕ ನೀತಿಯನ್ನು ಒಳಗೊಂಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್ ಹೇಳಿದ್ದಾರೆ.

 

ಮದ್ದೂರು ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆಶಯಕ್ಕೆ ಪೂರಕವಾಗಿ ಎಂಜಿ ನರೇಗಾ ಯೋಜನೆಯ ಹೆಸರನ್ನು ‘ವಿಕಸಿತ್‌ ಭಾರತ್‌ ಗ್ಯಾರಂಟಿ ಫಾರ್‌ ರೋಜ್ಗಾರ್‌’ ಎಂದು ಬದಲಾಯಿಸಲಾಗಿದೆ ಎಂದು ಹೇಳಿದರು. ಪಂಚಾಯತ್‌ ರಾಜ್‌ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಗ್ರಾಮೀಣಾಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ ಎಂದು ವಿವರಿಸಿದರು.

 

ಹಿಂದಿನ ನರೇಗಾ ಯೋಜನೆಯಡಿ ವರ್ಷಕ್ಕೆ 100 ದಿನಗಳ ಉದ್ಯೋಗ ಖಾತರಿ ಇತ್ತಾದರೆ, ಹೊಸ ಯೋಜನೆಯಡಿ 125 ದಿನಗಳ ಖಾತರಿ ಉದ್ಯೋಗ ಸಿಗಲಿದೆ. ಗ್ರಾಮೀಣ ಮೂಲಸೌಕರ್ಯ ಸುಧಾರಣೆ, ನೀರಾವರಿ ಯೋಜನೆಗಳಿಗೆ ಆದ್ಯತೆ, ಗ್ರಾಮೀಣ ರಸ್ತೆ, ಮಾರುಕಟ್ಟೆ, ಪರಿಸರ ಸಂರಕ್ಷಣೆ ಹಾಗೂ ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಒತ್ತು ನೀಡಲಾಗುತ್ತದೆ. ಕಾರ್ಮಿಕರ ಸಂಬಳದಲ್ಲಿ ಶೇ.25ರಷ್ಟು ಹೆಚ್ಚಳವಾಗಲಿದ್ದು, ಡಿಜಿಟಲ್‌ ಪಾವತಿ ವ್ಯವಸ್ಥೆಯಿಂದ ಅಕ್ರಮ ಮತ್ತು ಸೋರಿಕೆಗಳಿಗೆ ತೆರೆ ಬೀಳಲಿದೆ ಎಂದರು.

 

ಗ್ರಾಮೀಣ ಬಡತನದ ಪ್ರಮಾಣವು 2011-12ರಲ್ಲಿ ಶೇ.25.7 ಇದ್ದರೆ, 2023-24ರಲ್ಲಿ ಶೇ.4.86ಕ್ಕೆ ಇಳಿದಿದೆ ಎಂದು ಅವರು ಮಾಹಿತಿ ನೀಡಿದರು. ಜಾಬ್‌ ಕಾರ್ಡ್‌ಗಳ ಮಾನ್ಯತೆಯನ್ನು 5 ವರ್ಷಗಳಿಂದ 3 ವರ್ಷಗಳಿಗೆ ಇಳಿಸಿರುವುದು ದುರುಪಯೋಗ ತಡೆಯಲು ಕೈಗೊಂಡ ಕ್ರಮ ಎಂದು ಹೇಳಿದರು. ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಾದರೆ ಗ್ರಾಮೀಣ ಜನರ ನಗರ ವಲಸೆ ಕಡಿಮೆಯಾಗಲಿದೆ. ಕಾರ್ಮಿಕರ ಬ್ಯಾಂಕ್‌ ಖಾತೆಗೆ ನೇರ ಹಣ ಜಮೆಯಾಗುವುದರಿಂದ ಆರ್ಥಿಕ ಸ್ಥಿರತೆ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಾತನಾಡಿ, “ಹಿಂದೆ ಜೆಸಿಬಿ ಮೂಲಕ ಕೆಲಸ ಮಾಡಿಸುವುದು, ನಕಲಿ ಜಾಬ್‌ ಕಾರ್ಡ್‌ಗಳ ಬಳಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದವು. ಇದಕ್ಕೆ ತೆರೆ ಎಳೆಯಲು ಈ ಹೊಸ ಕಾಯ್ದೆ ತರಲಾಗಿದೆ. ಎಐ ತಂತ್ರಜ್ಞಾನ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಮೂಲಕ ಕೆಲಸದ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ತಪ್ಪು ಮಾಡಿದವರು ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ. ಸತೀಶ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ರವಿ, ಬಿಜೆಪಿ ಮುಖಂಡ ಮಂಜೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಬಾಗಲಕೋಟೆ

ರಬಕವಿ ಬನಹಟ್ಟಿ

“ಸಿಎಂ ಅಧಿಕಾರದಲ್ಲಿ ಕಳೆಯುವ ದಿನಗಳಿಗಿಂತ, ಜನರಿಗೆ ನೀಡಿದ ಫಲಿತಾಂಶವೇ ಮುಖ್ಯ: ಬಿವೈ ವಿಜಯೇಂದ್ರ”

ಬಾಗಲಕೋಟೆ: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬನಹಟ್ಟಿ ನ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ನಾಳೆ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತ – ಬೆಸ್ಕಾಂ ಎಚ್ಚರಿಕೆ

ಬೆಂಗಳೂರು: ಬೆಸ್ಕಾಂ ನಾಳೆ ಫೆಬ್ರವರಿ 13ರಂದು ತುರ್ತು ನಿರ್ವಹಣಾ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪದ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ

ಬೆಂಗಳೂರು/ಮೈಸೂರು/ದಾವಣಗೆರೆ:- ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

"KIMS ಆಸ್ಪತ್ರೆಯಲ್ಲಿ ಅನಧಿಕೃತ ಹಣ ವಸೂಲಿ: 3 ಸಿಬ್ಬಂದಿಗೆ ಗೇಟ್ ಪಾಸ್"

ಹುಬ್ಬಳ್ಳಿ:- ಉತ್ತರ ಕರ್ನಾಟಕದ ಬಡಜನರಿಗೆ ಆರೈಕೆ ನೀಡುವ ಹೆಸರಾಂತ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಮಂಡ್ಯ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಮದ್ದೂರಿನಲ್ಲಿ ಚೆಸ್ಕಾಂ ನೌಕರರ ಪ್ರತಿಭಟನೆ

ಮಂಡ್ಯ:- ಇಂಧನ ಇಲಾಖೆಯನ್ನು ಖಾಸಗೀಕರಣ ಹಾಗೂ ಹೊರಗುತ್ತಿಗೆಗೊಳಿಸಲ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ವಿಜಯನಗರ

ಸಿದ್ದರಾಮಯ್ಯ 2028ರವರೆಗೆ ಸಿಎಂ; ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧತೆ – ಜಮೀರ್ ಅಹಮ್ಮದ್ ಖಾನ್

ವಿಜಯನಗರ: ರಾಜ್ಯ ರಾಜಕೀಯದ ಚರ್ಚೆಯ ನಡುವೆ, ವಿಜಯನಗರ ಜಿಲ್ಲಾ ಉಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

"ಸಾಕು ನಾಯಿಗಳ ನಿಯಂತ್ರಣಕ್ಕೆ ಜಿಬಿಎ ಹೊಸ ನಿಯಮ; ಉಲ್ಲಂಘಿಸಿದರೆ ಮಾಲೀಕರ ಮೇಲೆ ಕಾನೂನು ಕ್ರಮ"

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆಯನ್ನ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ: ಜಾಮೀನು ತಿರಸ್ಕಾರ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶ ಪ್ರಯಾಣದ ಸುಳಿವು?

ಬೆಂಗಳೂರು: ಕಳೆದ ವರ್ಷ ಜುಲೈ 15ರಂದು ಭಾರತಿ ನಗರ ಪೊಲೀಸ್ ಠಾಣೆ ವ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1